ADVERTISEMENT

ಧುಮ್ಮಿಕ್ಕಿ ಹರಿಯುತ್ತಿದೆ ತುಂಗಭದ್ರಾ ನದಿ, 20 ಕ್ರಸ್‌ಗೇಟ್‌ ತೆರೆದು ನೀರು

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2020, 7:29 IST
Last Updated 18 ಆಗಸ್ಟ್ 2020, 7:29 IST
ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುತ್ತಿರುವುದರಿಂದ ನದಿ ಮೈದುಂಬಿಕೊಂಡು ಹರಿಯುತ್ತಿರುವುದು
ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುತ್ತಿರುವುದರಿಂದ ನದಿ ಮೈದುಂಬಿಕೊಂಡು ಹರಿಯುತ್ತಿರುವುದು   
""

ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ 20 ಕ್ರಸ್ಟ್‌ಗೇಟ್‌ಗಳನ್ನು ತೆರೆದು ಮಂಗಳವಾರ ನದಿಗೆ ನೀರು ಹರಿಸಲಾಗುತ್ತಿದೆ.

10 ಕ್ರಸ್ಟ್‌ಗೇಟ್‌ಗಳನ್ನು ತಲಾ ಎರಡು ಅಡಿ, ಇನ್ನುಳಿದ 10 ಗೇಟ್‌ಗಳನ್ನು ತಲಾ ಒಂದುವರೆ ಅಡಿ ಮೇಲಕ್ಕೆತ್ತಿ ಒಟ್ಟು 54,474 ಕ್ಯುಸೆಕ್‌ ನೀರು ನದಿಗೆ ಬಿಡಲಾಗಿದೆ.

ಸೋಮವಾರ 18 ಕ್ರಸ್ಟ್‌ಗೇಟ್‌ಗಳನ್ನು ತೆಗೆಯಲಾಗಿತ್ತು. 10 ಕ್ರಸ್ಟ್‌ಗೇಟ್‌ಗಳನ್ನು ತಲಾ ಎರಡು ಅಡಿ, 8 ಗೇಟ್‌ಗಳನ್ನು ತಲಾ ಒಂದು ಅಡಿ ಮೇಲಕ್ಕೆತ್ತಿ 44,507 ಕ್ಯುಸೆಕ್‌ ನೀರು ನದಿಗೆ ಬಿಡಲಾಗಿತ್ತು. ಭಾನುವಾರ ಸಂಜೆ ಮೂರು ಕ್ರಸ್ಟ್‌ಗೇಟ್‌ಗಳನ್ನು ತಲಾ ಒಂದು ಅಡಿ ಮೇಲೆ ತೆಗೆದು ಒಟ್ಟು 6,594 ಕ್ಯುಸೆಕ್‌ ನೀರು ಹರಿಸಲಾಗಿತ್ತು.

ADVERTISEMENT

‘ಜಲಾನಯನ ಪ್ರದೇಶದಲ್ಲಿ ಎರಡ್ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ತುಂಗಾ ಹೊರಹರಿವು ಕೂಡ ಹೆಚ್ಚಾಗಿದೆ. ಜಲಾಶಯ ತುಂಬಿರುವುದರಿಂದ ಒಳಹರಿವು ಹೆಚ್ಚಾದಷ್ಟು ನದಿಗೆ ಹೆಚ್ಚಿನ ನೀರು ಹರಿಸಲಾಗುವುದು’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.