ಸಂಡೂರು: ತಾಲ್ಲೂಕಿನ ಬನ್ನಿಹಟ್ಟಿ ಗ್ರಾಮದ ಹೊರ ವಲಯದ ಸಂಯುಕ್ತ ಖನಿಜ ತನಿಖಾ ಠಾಣೆಯ ಬಳಿಯ ಅಂಗಡಿಯಲ್ಲಿ ಈಚೆಗೆ ವ್ಯಾಪಾರ ಮಾಡುತ್ತಿದ್ದ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರವನ್ನು ಕದ್ದು ಪರಾರಿಯಾಗಿದ್ದ ಇಬ್ಬರು ಕಳ್ಳರನ್ನು ಶನಿವಾರ ಬಂಧಿಸುವಲ್ಲಿ ತೋರಣಗಲ್ಲು ಪೊಲೀಸ್ ಠಾಣೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಬನ್ನಿಹಟ್ಟಿ ಗ್ರಾಮದ ನಿವಾಸಿ ಹುಲಿಗೆಮ್ಮ ಅವರು ತಮ್ಮ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವೇಳೆ ಬೈಕ್‍ನಲ್ಲಿ ಬಂದ ಅಪರಿಚಿತ ಕಳ್ಳರಿಬ್ಬರು ಸಿಗರೇಟು ಖರೀದಿಸಿ ಬೆಂಕಿ ಪೊಟ್ಟಣವನ್ನು ಕೇಳುವ ನೆಪದಲ್ಲಿ ಮಹಿಳೆಯ ಕೊರಳಲ್ಲಿದ್ದ 10 ಗ್ರಾಂ ಚಿನ್ನದ ಸರವನ್ನು ಕದ್ದು, ಮಹಿಳೆಯನ್ನು ಹೊರ ತಳ್ಳಿ ಪರಾರಿಯಾಗಿದ್ದರು.
ತೋರಣಗಲ್ಲು ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಹೆಚ್ಚಿನ ತನಿಖೆ ಕೈಗೊಂಡು ಬಳ್ಳಾರಿಯ ಗುಡಾರ ನಗರದ ನಿವಾಸಿಗಳಾದ ನರೇಂದ್ರ (19), ವೈ.ಶೇಖರ್(19) ಇಬ್ಬರು ಕಳ್ಳರನ್ನು ವಶಕ್ಕೆ ಪಡೆದು ಚಿನ್ನದ ಸರವನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಕಾರ್ಯವನ್ನು ಬಳ್ಳಾರಿಯ ಎಸ್.ಪಿ ಅವರು ಶ್ಲಾಘಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.