ADVERTISEMENT

‘ಮೋದಿ ಜನತೆ ಕ್ಷಮೆಯಾಚಿಸಲಿ’

​ಪ್ರಜಾವಾಣಿ ವಾರ್ತೆ
Published 13 ಜನವರಿ 2019, 14:15 IST
Last Updated 13 ಜನವರಿ 2019, 14:15 IST

ಹೊಸಪೇಟೆ: ‘ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಪಕ್ಷದ ಗುಮಾಸ್ತ ಎಂದು ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನತೆಗೆ ಅವಮಾನ ಮಾಡಿದ್ದು, ಕೂಡಲೇ ಕ್ಷಮೆಯಾಚಿಸಬೇಕು’ ಎಂದು ಸಂಸದ ವಿ.ಎಸ್‌. ಉಗ್ರಪ್ಪ ಆಗ್ರಹಿಸಿದರು.

ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹತಾಶರಾಗಿ ಪ್ರಧಾನಿ ಈ ರೀತಿ ಹೇಳಿಕೆ ನೀಡಿದ್ದಾರೆ. ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ. ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ರಾಜ್ಯದ ಮತದಾರರಿಗೆ ಅವಮಾನ ಮಾಡಿದ್ದಾರೆ’ ಎಂದರು.

‘ಸಂವಿಧಾನದ ನಿಯಮಗಳ ಪ್ರಕಾರ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ಯಾರ ಗುಲಾಮರೂ ಅಲ್ಲ. ಪ್ರಧಾನಿಯಾದವರು ಅವರ ಸ್ಥಾನಕ್ಕೆ ಗೌರವ ತರುವಂತೆ ಮಾತನಾಡಬೇಕು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.