ADVERTISEMENT

ತೆಕ್ಕಲಕೋಟೆ: ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವು ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2024, 14:16 IST
Last Updated 6 ಫೆಬ್ರುವರಿ 2024, 14:16 IST
ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ ಸಿಬ್ಬಂದಿ ಸೋಮವಾರ ಇಲ್ಲಿನ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳ ತೆರವು ಕಾರ್ಯಾಚರಣೆ ನಡೆಸಿದರು
ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ ಸಿಬ್ಬಂದಿ ಸೋಮವಾರ ಇಲ್ಲಿನ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳ ತೆರವು ಕಾರ್ಯಾಚರಣೆ ನಡೆಸಿದರು   

ತೆಕ್ಕಲಕೋಟೆ: ಪಟ್ಟಣದಲ್ಲಿ ಅನಧಿಕೃತವಾಗಿ ಅಳವಡಿಸಿದ್ದ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಮತ್ತು ಕಟೌಟ್‌ಗಳನ್ನು ಪಟ್ಟಣ ಪಂಚಾಯಿತಿ ಸಿಬ್ಬಂದಿ ಸೋಮವಾರ ತೆರವುಗೊಳಿಸಿದರು.

‘ಸಾರ್ವಜನಿಕ ಜಾಗಗಳಲ್ಲಿ ನಿಗದಿತ ಶುಲ್ಕ ಸಂದಾಯ ಮಾಡಿ ಅನುಮತಿ ಪಡೆಯದೆ ಹಾಕಲಾಗಿದ್ದ, ಬ್ಯಾನರ್, ಬಂಟಿಂಗ್ಸ್ ಮತ್ತು ಕಟೌಟ್‌ಗಳನ್ನು ತೆರವುಗೊಳಿಸುತ್ತಿದ್ದು, ಇನ್ನು ಮುಂದೆ ಪೂರ್ವಾನುಮತಿ ಪಡೆಯದೆ ಜಾಹೀರಾತು ಹಾಕುವ ವ್ಯಕ್ತಿ ಮತ್ತು ಸಂಸ್ಥೆಗಳ ವಿರುದ್ಧ ದಂಡ ವಸೂಲಿ ಮಾಡಲಾಗುವುದು’ ಎಂದು ಮುಖ್ಯಾಧಿಕಾರಿ ಪರಶುರಾಮ ತಿಳಿಸಿದರು.

‘ಬಜೆಟ್ ಮಂಡನೆ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರು ಪಕ್ಷಬೇಧ ಮರೆತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಹಿನ್ನೆಲೆಯಲ್ಲಿ ಈ ತೆರವು ಕಾರ್ಯಾಚರಣೆ ನಡೆಸಲಾಗಿದೆ’ ಎಂದು ಆರೋಗ್ಯ ನಿರೀಕ್ಷಕಿ ಬಿ. ಅನ್ನಪೂರ್ಣ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.