ಬಿ. ಶ್ರೀರಾಮುಲು
ಬಳ್ಳಾರಿ: ‘ರಾಜ್ಯದಲ್ಲಿ ಹಂಚಬೇಕಾದ ಯೂರಿಯಾ ಅಕ್ರಮವಾಗಿ ಶ್ರೀಲಂಕಾ, ಬಾಂಗ್ಲಾದೇಶ ಸೇರಿ ಇತರಡೆ ಸಾಗಣೆ ಆಗುತ್ತಿರುವ ಬಗ್ಗೆ ಅನುಮಾನವಿದೆ. ಇಂಥ ಕೃತ್ಯದಲ್ಲಿ ಅಧಿಕಾರಿಗಳು, ವ್ಯಾಪಾರಸ್ಥರು ಸೇರಿ ಎಲ್ಲರೂ ಶಾಮೀಲು ಆಗಿದ್ದಾರೆ’ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆರೋಪಿಸಿದರು.
‘ಯೂರಿಯಾ ಸಾಕಷ್ಟು ದಾಸ್ತಾನು ಇದೆ ಎಂದು ಅಧಿಕಾರಿಗಳು ಹೇಳಿದರೆ, ಯೂರಿಯಾ ಸಿಗದಿರುವ ಬಗ್ಗೆ ರೈತರು ದೂರುತ್ತಾರೆ. ಅದಕ್ಕೆ ಅಕ್ರಮ ಸಾಗಣೆ ಬಗ್ಗೆ ಶಂಕೆ ಇದೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
‘ರಾಜ್ಯದಲ್ಲಿ ಕಳೆದೊಂದು ವರ್ಷದಲ್ಲಿ 981 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಈವರೆಗೆ ಒಬ್ಬ ರೈತನ ಕುಟುಂಬಕ್ಕೂ ಸಮರ್ಪಕವಾಗಿ ಪರಿಹಾರ ವಿತರಿಸಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.