
ಬಳ್ಳಾರಿ: ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ರೆಡ್ಡಿ ಹತ್ಯೆ ಹಿನ್ನೆಲೆಯಲ್ಲಿ ಬಳ್ಳಾರಿ ನಗರದ ಕಾನೂನು ಮತ್ತು ಸುವ್ಯವಸ್ಥೆ ಹಿತದೃಷ್ಟಿಯಿಂದ ಶನಿವಾರ ನಡೆಯಬೇಕಿದ್ದ ಮಹರ್ಷಿ ವಾಲ್ಮೀಕಿ ಪ್ರತಿಮೆಯ ಅನಾವರಣ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಈ ಕುರಿತು ಶಾಸಕ ನಾರಾ ಭರತ್ ರೆಡ್ಡಿ ಅವರ ಕಚೇರಿಯಿಂದ ಪ್ರಕಟಣೆ ಬಿಡುಗಡೆ ಮಾಡಲಾಗಿದೆ.
ಉದ್ವಿಗ್ನ ಪರಿಸ್ಥಿತಿಯಲ್ಲಿ ವಾಲ್ಮೀಕಿ ಪ್ರತಿಮೆಯನ್ನು ಅನಾವರಣ ಮಾಡುವ ಕಾರ್ಯಕ್ರಮ ಆಯೋಜಿಸಿದರೆ ಭಾರೀ ಅನಾಹುತಕ್ಕೆ ಕಾರಣವಾಗಲಿದೆ ಎಂದು ಜಿಲ್ಲೆಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿತ್ತು. ಹೀಗಾಗಿ, ಪ್ರತಿಮೆ ಅನಾವರಣ ಮಾಡಬಾರದು ಎಂದು ಸರ್ಕಾರ ಸೂಚಿಸಿದೆ ಎಂದು ಗೊತ್ತಾಗಿದೆ.
ಆದರೆ, ಶುಕ್ರವಾರ ಬೆಳಿಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಶಾಸಕ ನಾರಾ ಭರತ್ ರೆಡ್ಡಿ, ‘ಕಾಂಗ್ರೆಸ್ ಕಾರ್ಯಕರ್ತನ ಸಾವಿನಿಂದ ನಾವು ದುಃಖದಲ್ಲಿದ್ದೇವೆ. ಅದರೂ, ಶನಿವಾರ ಬಳ್ಳಾರಿ ನಗರದಲ್ಲಿ ಅಜ್ಜ (ವಾಲ್ಮೀಕಿ) ಪ್ರತಿಮೆ ಅನಾವರಣ ಮಾಡುತ್ತೇವೆ’ ಎಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.