ADVERTISEMENT

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ತಬ್ಧ

ಮೂರು ಗಂಟೆಗೂ ಅಧಿಕ ಸಮಯ ಸಾಲುಗಟ್ಟಿ ನಿಂತ ವಾಹನಗಳು

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2018, 13:45 IST
Last Updated 5 ಡಿಸೆಂಬರ್ 2018, 13:45 IST
ಹೊಸಪೇಟೆ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ವಾಹನಗಳು ಸಾಲುಗಟ್ಟಿ ನಿಂತಿರುವುದು–ಪ್ರಜಾವಾಣಿ ಚಿತ್ರ
ಹೊಸಪೇಟೆ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ವಾಹನಗಳು ಸಾಲುಗಟ್ಟಿ ನಿಂತಿರುವುದು–ಪ್ರಜಾವಾಣಿ ಚಿತ್ರ   

ಹೊಸಪೇಟೆ: ನಗರ ಹೊರವಲಯದ ಗುಂಡಾ ಸಸ್ಯೋದ್ಯಾನ ಸಮೀಪದಿಂದ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 50ರ ಮೇಲೆ ಬುಧವಾರ ಎರಡು ಗಂಟೆಗೂ ಹೆಚ್ಚು ಕಾಲ ವಾಹನಗಳ ಸಂಚಾರ ಸ್ತಬ್ಧಗೊಂಡಿತ್ತು.

ಹೊಸಪೇಟೆ–ಚಿತ್ರದುರ್ಗ ಮಧ್ಯೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಗುಂಡಾ ಸಸ್ಯೋದ್ಯಾನ ಬಳಿ ಮೇಲ್ಸೇತುವೆ ಹಾಗೂ ರಸ್ತೆ ವಿಸ್ತರಣೆ ಕೆಲಸ ನಡೆಯುತ್ತಿದೆ. ವಾಹನಗಳ ಸಂಚಾರಕ್ಕೆ ರಸ್ತೆ ಕಿರಿದಾಗಿದ್ದು, ಬುಧವಾರ ವಾಹನಗಳು ಎದುರು ಬದುರು ಬಂದು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಸುಮಾರು ಮೂರು ಗಂಟೆಗೂ ಅಧಿಕ ಸಮಯ ವಾಹನಗಳು ಸಾಲುಗಟ್ಟಿ ನಿಂತಿದ್ದವು.

‘ಬುಧವಾರ ಬೆಳಿಗ್ಗೆ ಎಂಟು ಗಂಟೆಯಿಂದ ಹನ್ನೊಂದು ಗಂಟೆಯ ವರೆಗೆ ರಸ್ತೆಯ ಬದಿಯಲ್ಲೇ ಬಸ್ಸಿನಲ್ಲಿ ಕಾಲ ಕಳೆಯಬೇಕಾಯಿತು. ನಿತ್ಯ ನಗರದಿಂದ ಮರಿಯಮ್ಮನಹಳ್ಳಿಗೆ ಕೆಲಸಕ್ಕೆ ಹೋಗಿ ಬರುತ್ತೇನೆ. ನಿತ್ಯ ಇದೇ ರೀತಿ ಆಗುತ್ತಿದ್ದು, ಸಾಕಷ್ಟು ಸಮಯ ಹಾಳಾಗುತ್ತಿದೆ. ಕಾಮಗಾರಿ ನಿಧಾನ ಗತಿಯಲ್ಲಿ ನಡೆಯುತ್ತಿರುವುದರಿಂದ ಈ ಸಮಸ್ಯೆ ಆಗುತ್ತಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೆ ಸುಗಮ ವಾಹನ ಸಂಚಾರಕ್ಕಾಗಿ ಸಂಚಾರ ಪೊಲೀಸರು ಅಥವಾ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಯನ್ನು ನೇಮಿಸಬೇಕು’ ಎಂದು ಪ್ರಾಧ್ಯಾಪಕ ಸಮದ್‌ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.