ADVERTISEMENT

VIDEO: ಶಿಥಿಲಾವಸ್ಥೆಯಲ್ಲಿ ಕಂಪ್ಲಿ ಸೇತುವೆ: ಹೊಸ ಸೇತುವೆ ನಿರ್ಮಾಣ ಯಾವಾಗ ?

ಪ್ರಜಾವಾಣಿ ವಿಶೇಷ
Published 23 ಆಗಸ್ಟ್ 2025, 4:06 IST
Last Updated 23 ಆಗಸ್ಟ್ 2025, 4:06 IST

ಬಳ್ಳಾರಿ ಜಿಲ್ಲೆಯ ಕಂಪ್ಲಿ ಮತ್ತು ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣಗಳ ನಡುವೆ ಸಂಪರ್ಕ ಕಲ್ಪಿಸಲೆಂದು ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಈ ಸೇತುವೆಗೆ ಈಗ 60 ವರ್ಷ. ಈಗಾಗಲೇ ಶಿಥಿಲಗೊಂಡಿರುವ ಈ ಸೇತುವೆಯು, ತುಂಗಭದ್ರಾ ಡ್ಯಾಂನಿಂದ ನದಿಗೆ 1 ಲಕ್ಷ ಕ್ಯೂಸೆಕ್ ಮೇಲ್ಪಟ್ಟು ನೀರು ಬಿಡುಗಡೆ ಮಾಡಿದರೆ ಮುಳುಗಿ ಹೋಗುತ್ತದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ತಮ್ಮ ಸರ್ಕಾರದ ಅವಧಿಯಲ್ಲಿಯೇ ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಈ ಕುರಿತು ಯಾವುದೇ ಪ್ರಕ್ರಿಯೆ ಶುರುವಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.