ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ಮದುರೆ ಗ್ರಾಮದಲ್ಲಿ ನವರಾತ್ರಿ ಪ್ರಯುಕ್ತ ಬುಧವಾರ ಹಮ್ಮಿಕೊಂಡಿದ್ದ ಕೆಂಚಮಾಳೇಶ್ವರ ದೇವರ ಉತ್ಸವದಲ್ಲಿ ಮಾಜಿ ಸಚಿವ ಶ್ರೀರಾಮುಲು ಡೊಳ್ಳು ಭಾರಿಸಿ ಸಂಭ್ರಮಿಸಿದರು.
ಕಂಪ್ಲಿ ಮಾಜಿ ಶಾಸಕ ಟಿ.ಎಚ್.ಸುರೇಶ್ ಬಾಬು ಅವರೂ ರಾಮುಲು ಜತೆಗೆ ಡೊಳ್ಳು ಬಡಿದರು.
ಇಬ್ಬರೂ ಡೊಳ್ಳು ಭಾರಿಸುತ್ತಾ ಕುಣಿಯುತ್ತಿದ್ದರೆ ಅಭಿಮಾನಿಗಳು ಶಿಳ್ಳೆ, ಚಪ್ಪಾಳೆ ತಟ್ಟಿ ಸಂಭ್ರಮಿಸಿದರು. ವಿಡಿಯೊ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.