ಹಗರಿಬೊಮ್ಮನಹಳ್ಳಿ: ಪಟ್ಟಣದ ವಿನಯ್ ಬೂದನೂರ್ ಅವರು ಭಾರತೀಯ ಅರಣ್ಯ ಸೇವೆ (ಐಎಫ್ಎಸ್)ಯಲ್ಲಿ 31 ನೇ ರ‍್ಯಾಂಕ್ ಪಡೆದಿದ್ದಾರೆ. ಈ ಮೂಲಕ ಅರಣ್ಯ ಇಲಾಖೆಯಲ್ಲಿ ಸೇವೆ ಮಾಡುವ ಗುರಿಯನ್ನು ಯಶಸ್ವಿಯಾಗಿ ತಲುಪಿದ್ದಾರೆ.
ಪಟ್ಟಣದ ಉದ್ಯಮಿ ವಿರೂಪಾಕ್ಷಗೌಡ್ರು–ಶಶಿಕಲಾ ಅವರ ಪುತ್ರರಾಗಿರುವ ವಿನಯ್ ಪಟ್ಟಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪೂರ್ಣಗೊಳಿಸಿ ದಾವಣಗೆರೆಯ ಅನುಭವ ಮಂಟಪದಲ್ಲಿ ಪಿಯು, ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಎಂಜಿನಿಯರಿಂಗ್ ಕಾಲೇಜ್‌ನಲ್ಲಿ ಬಿಇ ಮೆಕ್ಯಾನಿಕಲ್ ಪದವಿ ಪಡೆದಿದ್ದಾರೆ.
ದೆಹಲಿಯಲ್ಲಿ ಯುಪಿಎಸ್‌ಸಿ ತರಬೇತಿ ಪಡೆದು 31 ನೇ ರ್‍ಯಾಂಕ್ ಪಡೆಯುವ ಮೂಲಕ ತಾಲ್ಲೂಕಿನ ಹಿರಿಮೆ ಹೆಚ್ಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.