ADVERTISEMENT

ಕೂಡ್ಲಿಗಿ: ಮತಗಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2025, 5:45 IST
Last Updated 28 ಅಕ್ಟೋಬರ್ 2025, 5:45 IST
ಕೂಡ್ಲಿಗಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿದ್ದ ಮತಗಳ್ಳತನ ವಿರುದ್ದ ಸಹಿ ಸಂಗ್ರಹ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮೆರವಣಿಗೆ ನಡೆಸಿದರು
ಕೂಡ್ಲಿಗಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿದ್ದ ಮತಗಳ್ಳತನ ವಿರುದ್ದ ಸಹಿ ಸಂಗ್ರಹ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮೆರವಣಿಗೆ ನಡೆಸಿದರು   

ಕೂಡ್ಲಿಗಿ: ಬಿಹಾರ ಚುನಾವಣೆಯ ನಂತರ ಕೇಂದ್ರದಲ್ಲಿ ಕಾಂಗ್ರಸ್ ಅಧಿಕಾರಕ್ಕೆ ಬರಲಿದ್ದು, ರಾಹುಲ್ ಗಾಂಧಿ ಪ್ರಧಾನಿಯಾಗಲಿದ್ದರೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಗೋಪಿನಾಥ್ ಪಳಿನಿಯಪ್ಪನ್ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಮತಗಳ್ಳತನದ ವಿರುದ್ಧ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತಗಳ್ಳತನ ನಡೆಯದಿದ್ದರೆ ಕರ್ನಾಟಕದಲ್ಲಿ ನಮ್ಮ ಪಕ್ಷ 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತಿದ್ದೇವು. ಕೂಡ್ಲಿಗಿ ಕ್ಷೇತ್ರದಲ್ಲಿ ಶಾಸಕ ಡಾ. ಶ್ರೀನಿವಾಸ ಎನ್.ಟಿ. ಅವರು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲ್ಲತ್ತಿದ್ದರು. ನಮ್ಮ ಕಾರ್ಯಕರ್ತರು ಪ್ರತಿ ಮತಗಟ್ಟೆಯಲ್ಲಿನ ಮನೆ ಮನೆಗೆ ಭೇಟಿ ನೀಡಿ ಪರಿಶೀಲಿಸಿ ಕಳ್ಳ ಮತಗಳನ್ನು ಪತ್ತೆ ಹಚ್ಚುವುದರ ಜೊತೆಗೆ ಗ್ಯಾರಂಟಿ ಫಲಾನುಭವಿಗಳನ್ನು ಗುರುತಿಸಲಾಗುವುದು. ಭಾರತೀಯ ಚುನಾವಣಾ ಆಯೋಗ ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಇದನ್ನು ಕೇಂದ್ರ ಸರ್ಕಾರ ಗವರ್ನಮೆಂಟ್ ಎಲೆಕ್ಷನ್ ಕಮಿಷನ್ ಇಂಡಿಯಾ ಮಾಡಿಕೊಂಡು ಮತಗಳ್ಳತನ ಮಾಡುತ್ತಿದ್ದಾರೆ ಎಂದು ಅರೋಪಸಿದರು.

ಶಾಸಕ ಡಾ. ಶ್ರೀನಿವಾಸನ್ ಎನ್.ಟಿ. ಮಾತನಾಡಿ, ಮತಗಳ್ಳನದಂತಹ ವಿಷಯಗಳ ಬಗ್ಗೆ ಎಚ್ಚರ ವಹಿಸಿದೆ ಇದ್ದರೆ ಮುಂದಿನ ದಿನಗಳಲ್ಲಿ ಸಂವಿಧಾನ ಉಳಿಯುವುದಿಲ್ಲ. ಮುಂದೆ ಇನ್ನೂ ಎನೇನು ಚೋರಿಯಾಗುತ್ತವೆ ಎಂದು ಭಯವಾಗುತ್ತದೆ. ಮತಗಳ್ಳತನ ಖಂಡಿಸಿ ಹಾಗೂ ಸಂವಿಧಾನ ಉಳಿಸಿ ಅಭಿಯಾನವನ್ನು ದೇಶದಲ್ಲಿ ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಮತಗಳ್ಳತನದಿಂದ ಒಂದು ಹಳ್ಳಿಯ ಹಕ್ಕು, ಒಂದು ಕುಟುಂಬದ ಭವಿಷ್ಯ, ರೈತನ ಕನಸು ಕಳೆದು ಹೋಗುತ್ತದೆ. ಮತಗಳ್ಳತನ ನಿಲ್ಲಿಸಬೇಕು ಹಾಗೂ ಸಂವಿಧಾನ ಉಳಿಸಬೇಕು ಎಂದು ರಾಹುಲ್ ಗಾಂಧಿ ದೇಶಾದ್ಯಂತ ಹೋರಾಟ ಆರಂಭಿಸಿದ್ದಾರೆ. ಇದಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದರು.

ADVERTISEMENT

ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಗುರುಸಿದ್ದನಗೌಡ, ಹೊಸಹಳ್ಳಿ ಬ್ಲಾಕ್ ಅಧ್ಯಕ್ಷ ಕೆ.ಜಿ. ಕುಮಾರ್ ಗೌಡ, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಕಾವಲಿ ಶಿವಪ್ಪ ನಾಯಕ, ಕೆಪಿಸಿಸಿ ಉಪಾಧ್ಯಕ್ಷ ಮೋಹನ್ ಲಿಂಬೆಕಾಯಿ,
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ, ಮುಖಂಡರಾದ ಎನ್. ಟಿ. ತಮ್ಮಣ್ಣ, ಹಿರೇಕುಂಬಳಗುಂಟೆ ಉಮೇಶ, ನಾಗರಕಟ್ಟೆ ರಾಜಣ್ಣ, ಕೆ.ಎಂ. ಶಶಿಧರ, ಕುರಿಹಟ್ಟಿ ಬೋಸಯ್ಯ, ಜಿಲಾನ್, ಡಾಣಿ ರಾಘವೇಂದ್ರ ಪಾಲ್ಗೊಂಡಿದ್ದರು. ಇದಕ್ಕೂ ಮೊದಲು ಪಟ್ಟಣದ ಗಾಂಧಿ ಚಿತಾ ಭಸ್ಮವಿರುವ ಹುತಾತ್ಮರ ಸ್ಮಾರಕಕ್ಕೆ ಪುಷ್ಪರಾರ್ಚನೆ ಮಾಡಿ ನಮನ ಸಲ್ಲಿಸಿದ ಕಾಂಗ್ರೆಸ್ ನಾಯಕರು ಮತಗಳ್ಳತನ ವಿರುದ್ಧ ಘೋಷಣೆ ಕೂಗುತ್ತ ವೇದಿಕೆಗೆ ಬಂದು ಸೇರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.