ADVERTISEMENT

ವ್ಯಾಸರಾಯರ ವೃಂದಾವನ ಧ್ವಂಸಕ್ಕೆ ಸಂಸದ, ಶಾಸಕರ ಖಂಡನೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2019, 7:11 IST
Last Updated 18 ಜುಲೈ 2019, 7:11 IST

ಹೊಸಪೇಟೆ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಆನೆಗುಂದಿಯಲ್ಲಿ ವ್ಯಾಸರಾಯರ ವೃಂದಾವನ್ನು ಧ್ವಂಸಗೊಳಿಸಿರುವ ದುಷ್ಕೃತ್ಯವನ್ನು ಸಂಸದ ವೈ. ದೇವೇಂದ್ರಪ್ಪ, ಶಾಸಕ ಆನಂದ್‌ ಸಿಂಗ್‌ ಖಂಡಿಸಿದ್ದಾರೆ.

‘ನಿಧಿ ಆಸೆಗಾಗಿ ವೃಂದಾವನ್ನು ಧ್ವಂಸಗೊಳಿಸಿರುವುದು ಅಕ್ಷಮ್ಯ ಅಪರಾಧ. ಪದೇ ಪದೇ ಹಂಪಿ ಸುತ್ತಮುತ್ತ ಇಂತಹ ಘಟನೆಗಳು ನಡೆಯುತ್ತಿರುವುದು ದುರದೃಷ್ಟಕರ. ಹಂಪಿ ಸ್ಮಾರಕಗಳು ಹಾಗೂ ಅದರ ಸುತ್ತಮುತ್ತಲಿನ ಸ್ಥಳಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಸಂಸತ್ತಿನಲ್ಲಿ ಕೇಂದ್ರ ಸರ್ಕರದ ಗಮನ ಸೆಳೆಯುವ ಕೆಲಸ ಮಾಡುತ್ತೇನೆ’ ಎಂದು ವೈ. ದೇವೇಂದ್ರಪ್ಪ ಹೇಳಿದ್ದಾರೆ.

‘ದುಷ್ಕರ್ಮಿಗಳು ಮೂರು ಅಡಿಗಳ ವರೆಗೆ ನೆಲ ಅಗೆದು, ವೃಂದಾವನ ಹಾಳು ಮಾಡಿರುವುದು ತೀವ್ರ ಖಂಡನಾರ್ಹ. ಇದನ್ನು ಕಟುವಾಗಿ ಖಂಡಿಸುತ್ತೇನೆ. ಕೃತ್ಯ ನಡೆಸಿದವರನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಜರುಗದಂತೆ ಎಚ್ಚರ ವಹಿಸಬೇಕು’ ಎಂದು ಆನಂದ್‌ ಸಿಂಗ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.