
ಪ್ರಜಾವಾಣಿ ವಾರ್ತೆ
ಬಳ್ಳಾರಿ: ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಸಾರಾಂಗವು ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ತಮ್ಮ ಪ್ರಕಟಣೆಯ ಪುಸ್ತಕಗಳಿಗೆ ನವೆಂಬರ್ ತಿಂಗಳಲ್ಲಿ ಶೇ 20ರಷ್ಟು ವಿಶೇಷ ರಿಯಾಯಿತಿ ನೀಡಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ಮುನಿರಾಜು ತಿಳಿಸಿದ್ದಾರೆ.
ವಿಶ್ವವಿದ್ಯಾಲಯದ ಪ್ರಸಾರಾಂಗವು ಈವರೆಗೆ 40ಕ್ಕೂ ಹೆಚ್ಚು ಪುಸ್ತಕಗಳನ್ನು ಹೊರತಂದಿದೆ. ಪ್ರಚಾರೋಪನ್ಯಾಸ ಮಾಲೆ, ವಿಶೇಷ ಪುಸ್ತಕಗಳು (ಪಠ್ಯಪುಸ್ತಕಗಳನ್ನು ಹೊರತುಪಡಿಸಿ) ಸೇರಿದಂತೆ ಈ ಕೃತಿಗಳು ಕೈಗೆಟಕುವ ಬೆಲೆಯಲ್ಲಿ ದೊರೆಯಬೇಕೆಂಬ ಉದ್ದೇಶದಿಂದ ಪುಸ್ತಕಗಳ ಮೇಲೆ ಶೇ 20ರಷ್ಟು ರಿಯಾಯತಿ ಘೋಷಿಸಿದೆ. ಇದರ ಪ್ರಯೋಜನ ಪಡೆಯಲು ವಿಶ್ವವಿದ್ಯಾಲಯದ ಪ್ರಸಾರಾಂಗಕ್ಕೆ ಭೇಟಿ ನೀಡಬಹುದು ಅಥವಾ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.