ADVERTISEMENT

ಸಿರುಗುಪ್ಪ | ನೀರಿನ ಅಭಾವ: 8 ದಿನಗಳಿಗೊಮ್ಮೆ ಕುಡಿಯುವ ನೀರು ಪೂರೈಕೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2024, 15:31 IST
Last Updated 28 ಮಾರ್ಚ್ 2024, 15:31 IST
   

ಸಿರುಗುಪ್ಪ:  ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರನ್ನು 8 ದಿನಗಳಿಗೊಮ್ಮೆ ಸರಬರಾಜು ಮಾಡಲಾಗುವುದು ಎಂದು ಸಿರುಗುಪ್ಪ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸಮಪರ್ಕವಾಗಿ ಮಳೆಯಾಗದೆ ಬರಗಾಲ ಉದ್ಭವಿಸಿರುವುದರಿಂದ, ತುಂಗಭದ್ರಾ ನದಿಯಲ್ಲಿ ನೀರು ಬತ್ತಿ ಹೋಗಿರುತ್ತದೆ. ಸಿರುಗುಪ್ಪ ನಗರದ ಬಳ್ಳಾರಿ ರಸ್ತೆಯಲ್ಲಿರುವ ಕುಡಿಯುವ ನೀರಿನ ಕೆರೆಯಲ್ಲಿಯೂ ನೀರಿನ ಸಂಗ್ರಹಣೆ ಕಡಿಮೆ ಇರುವುದರಿಂದ ಮುಂದಿನ ದಿನಗಳಲ್ಲಿ ಸಿರುಗುಪ್ಪ ನಗರಕ್ಕೆ ಭೀಕರ ಕುಡಿಯುವ ನೀರಿನ ಅಭಾವ ಉಂಟಾಗುವ ಸಂಭವವಿರುತ್ತದೆ. ಹೀಗಾಗಿ ಇದಕ್ಕೂ ಮುನ್ನ ಸಿರುಗುಪ್ಪ ನಗರ ವ್ಯಾಪ್ತಿಯಲ್ಲಿ ಕೆರೆಯಲ್ಲಿರುವ ನೀರನ್ನು 5 ದಿನಗಳಿಗೊಮ್ಮೆ ಸರಬರಾಜು ಮಾಡಲಾಗುತಿತ್ತು. ಬರುವ ಏ. 2ರಿಂದ ಕೆರೆಯ ನೀರನ್ನು 5 ದಿನಗಳ ಬದಲಾಗಿ 8 ದಿನಗಳಿಗೊಮ್ಮೆ ಸರಬರಾಜು ಮಾಡಲಾಗುತ್ತದೆ. ಮುಂದೆ ಎದುರಾಗಬಹುದಾದ ಭೀಕರ ಕುಡಿಯುವ ನೀರಿನ ಅಭಾವವನ್ನು ನೀಗಿಸುವ ಹಿತದೃಷ್ಟಿಯಿಂದ ನಗರಸಭೆಯು ಈ ಕ್ರಮ ಕೈಗೊಂಡಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT