ADVERTISEMENT

ಬಾಲಕಿ ಮನೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ: ಪೋಷಕರು, ಪೊಲೀಸರ ವಿರುದ್ಧ ಗರಂ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2019, 9:21 IST
Last Updated 14 ಏಪ್ರಿಲ್ 2019, 9:21 IST
   

ಹೊಸಪೇಟೆ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಬಾಯಿ ಅವರು ಭಾನುವಾರ ಅತ್ಯಾಚಾರಕ್ಕೊಳಗಾದ ಬಾಲಕಿ ಮನೆಗೆ ಭೇಟಿ ನೀಡಿ, ಪೋಷಕರೊಂದಿಗೆ ಮಾತುಕತೆ ನಡೆಸಿದರು.

‘ಮಕ್ಕಳ ಮೇಲೆ ನಿಗಾ ವಹಿಸುವುದು ಪೋಷಕರಾದವರ ಜವಾಬ್ದಾರಿ. ಇಲ್ಲದಿದ್ದರೆ ಈ ರೀತಿಯ ಘಟನೆಗಳು ಜರುಗುತ್ತವೆ’ ಎಂದು ಪಾಲಕರಿಗೆ ಖಾರವಾಗಿ ಹೇಳಿದರು.

‘ಅತ್ಯಾಚಾರ ನಡೆಸಿರುವ ಆರೋಪಿಯನ್ನು ಬಂಧಿಸುವುದಷ್ಟೇ ಪೊಲೀಸರ ಕೆಲಸವಲ್ಲ. ಸಂತ್ರಸ್ತ ಬಾಲಕಿಗೆ ಸೂಕ್ತ ರಕ್ಷಣೆ ಕೊಡಬೇಕು’ ಎಂದು ಗ್ರಾಮೀಣ ಪೊಲೀಸ್‌ ಠಾಣೆ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ದೇವರಗುಡಿ ಚಂದ್ರಶೇಖರ್‌ ಎಂಬಾತ ಸತತ ಮೂರು ತಿಂಗಳು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ. ವೈದ್ಯಕೀಯ ಪರೀಕ್ಷೆಯಿಂದ ಬಾಲಕಿ ಗರ್ಭವತಿಯಾದ ವಿಷಯ ಗೊತ್ತಾಗುತ್ತಿದ್ದಂತೆ ಆಕೆಯ ತಾಯಿ ಗ್ರಾಮೀಣ ಠಾಣೆಗೆ ಏ.9ರಂದು ದೂರು ಕೊಟ್ಟಿದ್ದರು. ಪೊಲೀಸರು ಆರೋಪಿಯನ್ನು ಏ. 13ರಂದು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.