ಸಿರುಗುಪ್ಪ: ‘ಜ್ಞಾನವಿಕಾಸ ಕೇಂದ್ರವು ಮಹಿಳೆಯರನ್ನು ಸಬಲೀಕರಣಗೊಳಿಸಿ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಆರಂಭವಾದ ವೇದಿಕೆವಾಗಿದೆ’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಎಸ್.ಸೋಮಯ್ಯ ಹೇಳಿದರು.
ತಾಲ್ಲೂಕಿನ ರಾರಾವಿ ಗ್ರಾಮದ ಈಶ್ವರ ದೇವಸ್ಥಾನ ಆವರಣದಲ್ಲಿ ಶನಿವಾರ ನಡೆದ ಸ್ವಸಹಾಯ ಸಂಘಗಳ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಮಹಿಳೆಯರ ಆರ್ಥಿಕ, ಬೌದ್ಧಿಕ, ಸಾಮಾಜಿಕ ಬಡತನಗಳನ್ನು ದೂರ ಮಾಡುವ ದೃಷ್ಟಿಯಿಂದ ಜ್ಞಾನ ವಿಕಾಸ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಮಹಿಳೆಯರಿಗೆ ಶಿಕ್ಷ ಣ, ಆರ್ಥಿಕ ನೆರವು ನೀಡಿ ನಿರಂತರ ಬದಲಾವಣೆಗೆ ಪ್ರಯತ್ನಿಸಲಾಗುತ್ತಿದೆ’ ಎಂದು ತಿಳಿಸಿದರು.
ಜ್ಞಾನ ವಿಕಾಸ ಸಮನ್ವಯಾಧಿಕಾರಿ ಪ್ರಿಯಾ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಬಸವನಗೌಡ, ನಿವೃತ್ತ ಶಿಕ್ಷಕ ನೀಲಕಂಠಯ್ಯ ಸ್ವಾಮಿ, ಅತಿಥಿ ಶಿಕ್ಷಕ ಬಸಪ್ಪ, ಸೇವಾ ಪ್ರತಿನಿಧಿಗಳಾದ ಅಜಯ್, ವಾಣಿಶ್ರೀ, ವಿ.ಎಲ್.ಇ. ಕವಿತಾ, ಗುರುಸಿದ್ದಯ್ಯ ಸ್ವಾಮಿ, ಕೇಂದ್ರದ ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.