ADVERTISEMENT

ವಿಶ್ವ ಹುಲಿ ದಿನ: ಹುಲಿ ದತ್ತು ಪಡೆದ ಸಚಿವ ಆನಂದ್‌ ಸಿಂಗ್‌

​ಪ್ರಜಾವಾಣಿ ವಾರ್ತೆ
Published 29 ಜುಲೈ 2020, 13:21 IST
Last Updated 29 ಜುಲೈ 2020, 13:21 IST
ಸಚಿವ ಆನಂದ್ ಸಿಂಗ್
ಸಚಿವ ಆನಂದ್ ಸಿಂಗ್   
""

ಹೊಸಪೇಟೆ: ವಿಶ್ವ ಹುಲಿ ದಿನದ ಪ್ರಯುಕ್ತ ಅರಣ್ಯ ಸಚಿವ ಆನಂದ್‌ ಸಿಂಗ್‌ ಅವರು ಬುಧವಾರ ತಾಲ್ಲೂಕಿನ ಕಮಲಾಪುರ ಬಳಿಯ ಅಟಲ್‌ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದ ಹುಲಿಯನ್ನು ದತ್ತು ತೆಗೆದುಕೊಂಡಿದ್ದಾರೆ.

‘ಸಚಿವ ಆನಂದ್‌ ಸಿಂಗ್‌ ಅವರು ₹1 ಲಕ್ಷ ಪಾವತಿಸಿ, ಸಿಂಧೂ ಹೆಸರಿನ ಹುಲಿಯನ್ನು ಒಂದು ವರ್ಷದ ಅವಧಿಗೆ ದತ್ತು ಸ್ವೀಕರಿಸಿದ್ದಾರೆ’ ಎಂದು ಉದ್ಯಾನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎನ್‌. ಕಿರಣ್‌ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

‘ಇದು ಪ್ರಚಾರಕ್ಕಾಗಿ ಅಲ್ಲ, ಬೇರೆಯವರಿಗೆ ಪ್ರೇರಣೆ ತುಂಬಲು ಹುಲಿ ದತ್ತು ಪಡೆದಿರುವೆ’ ಎಂದು ಆನಂದ್‌ ಸಿಂಗ್‌ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.