ಕಂಪ್ಲಿ: ಆಪರೇಷನ್ ಸಿಂಧೂರ ಯಶಸ್ವಿಯಾದ ನಿಮಿತ್ತ ಪಟ್ಟಣದ ದೇವಾಂಗ ಸಮಾಜದ ಬಣ್ಣದ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತು ಗದ್ದೆ ಚೌಡೇಶ್ವರಿ ದೇವಸ್ಥಾನದಲ್ಲಿ ಅರ್ಚಕ ಮಿಟ್ಟಿ ಶಂಕರ್ ಪೌರೋಹಿತ್ಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಜರುಗಿತು.
ಧಾರ್ಮಿಕ ಕಾರ್ಯಕ್ರಮ ಬಳಿಕ ಬಣ್ಣದ ಚೌಡೇಶ್ವರಿ, ಗದ್ದೆ ಚೌಡೇಶ್ವರಿ ದೇವಿ ವಿಗ್ರಹಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.
ದೇವಾಂಗ ಸಮಾಜದ ಅಧ್ಯಕ್ಷ ಸಪ್ಪರದ ರಾಘವೇಂದ್ರ, ಪ್ರಮುಖರಾದ ಮಾಗನೂರು ರಾಜೇಶವರ್ಮ, ಗದ್ಗಿ ವಿರುಪಾಕ್ಷಿ, ದೇವಾಂಗ ಸಮುದಾಯದವರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.