ADVERTISEMENT

ಯುವಜನೋತ್ಸವ; ಆಕರ್ಷಕ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2019, 16:15 IST
Last Updated 2 ಜನವರಿ 2019, 16:15 IST
ತೋಟಗಾರಿಕೆ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ರೀತಿಯ ಪೋಷಾಕು ಧರಿಸಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು–ಪ್ರಜಾವಾಣಿ ಚಿತ್ರ
ತೋಟಗಾರಿಕೆ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ರೀತಿಯ ಪೋಷಾಕು ಧರಿಸಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು–ಪ್ರಜಾವಾಣಿ ಚಿತ್ರ   

ಹೊಸಪೇಟೆ: ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಸಕ್ತ ಸಾಲಿನ ಯುವಜನೋತ್ಸವದ ಪ್ರಯುಕ್ತ ಬುಧವಾರ ನಗರದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಮೆರವಣಿಗೆ ಜರುಗಿತು.

ಕಾಲೇಜು ಯುವಕರು ಶ್ರೀ ಕೃಷ್ಣದೇವರಾಯ, ಶ್ರೀಕೃಷ್ಣನ ವೇಷಧಾರಿಗಳಾಗಿ ಗಮನ ಸೆಳೆದರೆ, ಯುವತಿಯರು ಇಳಕಲ್‌ ಸೀರೆ ಧರಿಸಿ, ಕೈಯಲ್ಲಿ ಹೆಣೆದ ಬುಟ್ಟಿ ಹಿಡಿದುಕೊಂಡು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.

ಇಲ್ಲಿನ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಆರಂಭಗೊಂಡ ಮೆರವಣಿಗೆಯು ಕಾಲೇಜು ರಸ್ತೆ ಮೂಲಕ ಹಾದು ವಿಜಯನಗರ ಕಾಲೇಜು ಎದುರಿನ ಮೈದಾನದ ಬಳಿ ಕೊನೆಗೊಂಡಿತು. ಬಾಗಲಕೋಟೆ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ರಾಜ್ಯದ ಒಂಬತ್ತು ತೋಟಗಾರಿಕೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ADVERTISEMENT

ಸಮೀಪದ ಮುನಿರಾಬಾದ್‌ ತೋಟಗಾರಿಕೆ ಕಾಲೇಜಿನಲ್ಲಿ ಯುವಜನೋತ್ಸವಕ್ಕೆ ಬುಧವಾರ ಚಾಲನೆ ನೀಡಲಾಗಿದ್ದು, ಡಿ. 5ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಬುಧವಾರ ಯುವಜನೋತ್ಸವಕ್ಕೆ ಚಾಲನೆ ನೀಡಲಾಗಿದ್ದು, ಡಿ. 5ರ ವರೆಗೆ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.