ADVERTISEMENT

ಸಚಿವರ ಸಭೆಗೆ ರಾಜಕೀಯ ಉದ್ದೇಶವಿಲ್ಲ: ಜಮೀರ್‌

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2024, 15:58 IST
Last Updated 9 ಅಕ್ಟೋಬರ್ 2024, 15:58 IST
ಬಿ.ಝಡ್.ಜಮೀರ್ ಅಹಮದ್ ಖಾನ್
ಬಿ.ಝಡ್.ಜಮೀರ್ ಅಹಮದ್ ಖಾನ್   

ಬಳ್ಳಾರಿ: ‘ದಲಿತ ಸಚಿವರ ಭೇಟಿ ಮತ್ತು ಸಭೆಗಳಿಗೆ ರಾಜಕೀಯ ಉದ್ದೇಶಗಳಿಲ್ಲ’ ಎಂದು ವಸತಿ ಮತ್ತು ವಕ್ಫ್‌ ಖಾತೆ ಸಚಿವ ಜಮೀರ್‌ ಅಹಮದ್‌ ಖಾನ್‌ ಸ್ಪಷ್ಟಪಡಿಸಿದರು.

ಬಳ್ಳಾರಿಯಲ್ಲಿ ಬುಧವಾರ ಮಾಧ್ಯಮದವೊಂದಿಗೆ ಮಾತನಾಡಿದ ಅವರು, ‘ಸಚಿವ ಸತೀಶ ಜಾರಕಿಹೊಳಿ ಮತ್ತು ಜಿ. ಪರಮೇಶ್ವರ್‌ ಅವರು ಮೈಸೂರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಹದೇವಪ್ಪ ಅವರ ನಿವಾಸದಲ್ಲೂ ಭೇಟಿಯಾಗಿದ್ದರು. ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ’ ಎಂದರು. 

‘ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ’ ಎಂದು ಹೇಳಿದ ಅವರು, ‘ಜಾತಿ ಜನಗಣತಿ ವಿಚಾರವನ್ನು ಸಂಪುಟ ಸಭೆಯಲ್ಲಿ ಇಟ್ಟು ಚರ್ಚೆ ಮಾಡಲಾಗುವುದು’ ಎಂದರು. 

ADVERTISEMENT

‘ಸಂಸದ ಇ.ತುಕಾರಾಂ ಅವರಿಂದ ತೆರವಾದ ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಹಲವು ಆಕಾಂಕ್ಷಿಗಳಿದ್ದು, ಸೂಕ್ತವಾದವರನ್ನು ಹೈಕಮಾಂಡ್‌ ಆಯ್ಕೆ ಮಾಡಲಿದೆ’ ಎಂದು ಇದೇ ವೇಳೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.