ADVERTISEMENT

ಅಪರಾಧ ಚಟುವಟಿಕೆಗಳಿಂದ ದೂರವಿರಿ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2011, 10:10 IST
Last Updated 20 ಮಾರ್ಚ್ 2011, 10:10 IST

ದೊಡ್ಡಬಳ್ಳಾಪುರ: ಯುವ ಸಮುದಾಯ ಅಪರಾಧ ಚಟುವಟಿಕೆಗಳಿಂದ ದೂರವಿರಬೇಕು ಎಂದು ಶಾಸಕ ಡಿ.ಕೆ.ಶಿವಕುಮಾರ್ ಸಲಹೆ ನೀಡಿದರು.ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ವೇದಿಕೆ ತಾಲ್ಲೂಕು ಶಾಖೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಎಲ್ಲಾ ಜಾತಿ, ಧರ್ಮದವರು ವೇದಿಕೆಯಲ್ಲಿದ್ದಾರೆ. ವೇದಿಕೆ ಒಂದು ಪಕ್ಷ ಅಥವಾ ಜಾತಿಗೆ ಸೀಮಿತವಲ್ಲ. ಸಮಾಜದ ಏಳಿಗೆಗೆ ಯುವಕರು ದುಡಿಯುವಂತೆ ಮಾಡುವುದೇ ವೇದಿಕೆಯ ಮುಖ್ಯ ಉದ್ದೇಶ ಎಂದು ಹೇಳಿದರು.ದೊಡ್ಡಬಳ್ಳಾಪುರ ಕ್ಷೇತ್ರದ ಬಗ್ಗೆ ಅಪಾರ ಅಭಿಮಾನವಿದೆ. ಈ ಹಿನ್ನೆಲೆಯಲ್ಲಿಯೇ ತಾವು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ್ದು ಇಲ್ಲಿಯೇ ಎಂದು ಹೇಳೀದರು.

ಡಿ.ಕೆ.ಶಿವಕುಮಾರ್ ಅಭಿಮಾನಿಗಳ ವೇದಿಕೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಧ್ಯಕ್ಷರಾಗಿ ಸಿ.ವಿದ್ಯಾಧರ ಅವರು ಈ ಸಂದರ್ಭದಲ್ಲಿ ಅಧಿಕಾರ ಸ್ವೀಕರಿಸಿದರು. ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ಕಾಂಗ್ರೆಸ್ ಸಮಿತಿ ತಾಲ್ಲೂಕು ಅಧ್ಯಕ್ಷ ಆರ್.ಗೋವಿಂದರಾಜ್, ಕಾರ್ಯದರ್ಶಿ ಜಿ.ಲಕ್ಷ್ಮೀಪತಿ, ಡಿ.ವಿ.ಅಶ್ವತ್ಥಪ್ಪ, ಭಾರತ ಸೇವಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಿ.ವೆಂಕಟೇಶ್, ಅಪ್ಪಗಾರನಹಳ್ಳಿ ವೆಂಕಟೇಶ್, ಯುವ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಡಿ.ಸಿ.ಶಶಿಧರ್, ವೆಂಕಟೇಶ್(ಅಪ್ಪಿ), ನಗರಸಭೆ ಅಧ್ಯಕ್ಷೆ ಕಾಂತಮ್ಮ ಕೃಷ್ಣಮೂರ್ತಿ,ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ವೇದಿಕೆ ತಾಲ್ಲೂಕು ಅಧ್ಯಕ್ಷ ಡಿ.ಎಸ್.ವೆಂಕಟೇಶ್, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ ಜಿ.ಸೋಣ್ಣೇಗೌಡ ಇತರರು ಇದ್ದರು.     

ತಪಾಸಣಾ ಶಿಬಿರ: ಬೆಂಗಳೂರಿನ ಮಹಿಳಾ ದಕ್ಷತಾ ಸಮಿತಿ, ಎಂ.ಎಸ್.ರಾಮಯ್ಯ ವೈದ್ಯಕೀಯ ಶಿಕ್ಷಣ ಆಸ್ಪತ್ರೆ, ಹಾಡೋನಹಳ್ಳಿ ಸಾಮಾಜಿಕ ಸೇವಾ ಸಮಿತಿ ಆಶ್ರಯದಲ್ಲಿ ಭಾನುವಾರ ಬೆಳಿಗ್ಗೆ 9 ಗಂಟೆಗೆ ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ವಿಶೇಷ ವೈದ್ಯಕೀಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ವಿ.ಎಸ್.ರಮೇಶ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.