ADVERTISEMENT

ದೊಡ್ಡಬಳ್ಳಾಪುರ | ಗೀತಂ ವಿ.ವಿ.ಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 0:31 IST
Last Updated 18 ಫೆಬ್ರುವರಿ 2026, 0:31 IST
<div class="paragraphs"><p>(ಸಾಂದರ್ಭಿಕ ಚಿತ್ರ)</p></div>

(ಸಾಂದರ್ಭಿಕ ಚಿತ್ರ)

   

ಗೆಟ್ಟಿ ಚಿತ್ರ

ದೊಡ್ಡಬಳ್ಳಾಪುರ: ನಾಗದೇನಹಳ್ಳಿ ಗೀತಂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್‌ ಕಟ್ಟಡದ ಮೇಲಿಂದ ಬಿದ್ದು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ADVERTISEMENT

ಮೃತ ವಿದ್ಯಾರ್ಥಿನಿ ಆನೇಕಲ್ ತಾಲ್ಲೂಕಿನ ಸರ್ಜಾಪುರದ ನಯನಾ (20), 12ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡವರು. ವಿ.ವಿಯಲ್ಲಿ ಕಂಪ್ಯೂಟ‌ರ್ ಸೈನ್ಸ್ ವಿದ್ಯಾಭ್ಯಾಸ ಮಾಡುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಭೇಟಿ ನೀಡಿ ಮಾಹಿತಿ ಪಡೆದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.