ADVERTISEMENT

ಆಹಾರ ಭದ್ರತಾ ಯೋಜನೆ: 17ಕ್ಕೆ ಕುಂದುಕೊರತೆ ಸಭೆ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2012, 19:30 IST
Last Updated 15 ಮಾರ್ಚ್ 2012, 19:30 IST

ದೊಡ್ಡಬಳ್ಳಾಪುರ: ಆಹಾರ ಭದ್ರತಾ ಯೋಜನೆಯಡಿ ಮಾ.17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಂದ ಕುಂದುಕೊರತೆಗಳಿಗೆ ಸಂಬಂಧಿಸಿದ ಅರ್ಜಿ,ಅಹವಾಲುಗಳನ್ನು ಸ್ವೀಕರಿಸಲಾಗುವುದು.

ಅರ್ಜಿ ಸ್ವೀಕರಿಸುವ ಸ್ಥಳ: ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಂಗಣ, ಪೋಡಿಯಂ ಬ್ಲಾಕ್ ವಿಶ್ವೇಶ್ವರಯ್ಯ ಗೋಪುರ, ಡಾ.ಅಂಬೇಡ್ಕರ್ ವೀದಿ, ಬೆಂಗಳೂರು -560 001
ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕಂದಾಯ, ಶಿಕ್ಷಣ, ಪಂಚಾಯತ್ ರಾಜ್, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ಇಲಾಖೆ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.

 ಸಾರ್ವಜನಿಕರು ಈ ಅವಕಾಶ ಉಪಯೋಗಿಸಿಕೊಂಡು ಆಹಾರಧಾನ್ಯಗಳ ಲಭ್ಯತೆ ಮತ್ತು ಬೆಲೆ ನಿಯಂತ್ರಣದ ಬಗ್ಗೆ ಅಹವಾಲುಗಳನ್ನು ಖುದ್ದು ಹಾಜರಾಗಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.