ADVERTISEMENT

ಎತ್ತಿನಹೊಳೆ: ಶೀಘ್ರ ಜಾರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2012, 19:30 IST
Last Updated 3 ಫೆಬ್ರುವರಿ 2012, 19:30 IST

ದೊಡ್ಡಬಳ್ಳಾಪುರ: ಎತ್ತಿನಹೊಳೆ ಯೋಜನೆಯನ್ನು ಶೀಘ್ರ ಜಾರಿಗೊಳಿಸುವಂತೆ ಮತ್ತು ಬಯಲು ಸೀವೆುಯ ಜಿಲ್ಲೆಗಳ ಕೆರೆಗಳಿಗೆ ನೀರು ತುಂಬಿಸುವ ಡಾ.ಪರಮಶಿವಯ್ಯ ವರದಿಯನ್ನು ಪ್ರಸಕ್ತ ವರ್ಷದಿಂದಲೇ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಶಾಸಕ ಜೆ.ನರಸಿಂಹಸ್ವಾಮಿ ತಿಳಿಸಿದ್ದಾರೆ.

 ಗುರುವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ತಾಲ್ಲೂಕಿನ ಕುಡಿಯುವ ನೀರಿನ ಸಮಸ್ಯೆಯ ತೀವ್ರತೆಯನ್ನು ಅಂಕಿ ಅಂಶಗಳ ಸಮೇತ ವಿವರಿಸಲಾಗಿದೆ.

ತಾಲ್ಲೂಕಿಗೆ ಅಭಿವೃದ್ಧಿ ಕೆಲಸಗಳಿಗಿಂತಲೂ ಹೆಚ್ಚಿನ ಹಣವನ್ನು ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ವೆಚ್ಚ ಮಾಡಲಾಗುತ್ತಿದೆ. ಪ್ರತಿ ವರ್ಷ ರೈತರು ನೀರಿಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ಸಾಲಗಾರರಾಗುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ  ಮುಖ್ಯಮಂತ್ರಿಗಳ ಹಾಗೂ ಜಲಸಂಪನ್ಮೂಲ ಸಚಿವರು ಹಾಗೂ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.