ಆನೇಕಲ್: ತಾಲ್ಲೂಕಿನ ಜಿಗಣಿ ಸಮೀಪ ಎರಡು ತಲೆ ಹಾವನ್ನು ಮಾರಾಟ ಮಾಡಲು ಬಂದಿದ್ದ ವ್ಯಕ್ತಿಯನ್ನು ಮೈಸೂರು ಅರಣ್ಯ ಸಂಚಾರಿ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ತಮಿಳುನಾಡಿನ ವಿಜಯನ್(30) ಎಂದು ಗುರುತಿಸಲಾಗಿದೆ. ಆರೋಪಿಯು ತಮಿಳುನಾಡಿನ ಕೃಷ್ಣಗಿರಿಯಿಂದ ಎಲೆಕ್ಟ್ರಾನಿಕ್ ಸಿಟಿ ಮಾರ್ಗವಾಗಿ ಹಾವನ್ನು ತರುತ್ತಿದ್ದಾನೆ ಎಂಬ ಮಾಹಿತಿ ಕಲೆ ಹಾಕಿದ ಮೈಸೂರು ಸಂಚಾರಿ ಅರಣ್ಯ ಸಿಐಡಿ ಸಬ್ ಇನ್‌ಸ್ಪೆಕ್ಟರ್ ರಾಜಶೇಖರ್ ಹಾಗೂ ತಂಡದವರು ಜಿಗಣಿಯಲ್ಲಿ ಹಾವು ಕೊಳ್ಳುವವರಂತೆ ನಟಿಸಿ, ಆರೋಪಿಯನ್ನು ಬಲೆಗೆ ಕೆಡವಿದ್ದಾರೆ. ನಂತರ ಆತನನ್ನು ಬಂಧಿಸಿ ಆನೇಕಲ್ ಅರಣ್ಯ ವಲಯ ಅಧಿಕಾರಿಗಳ ವಶಕ್ಕೆ ಒಪ್ಪಿಸಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳಾದ ಜವರೇಗೌಡ, ಕುಮಾರ್, ರವಿಕುಮಾರ್, ರಾಜು, ಜಯರಾಮ್, ನಾಗಯ್ಯ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.