ADVERTISEMENT

ಕಾಂಗ್ರೆಸ್‌ ಗೆಲುವು ಖಚಿತ: ಡಿಕೆಶಿ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2014, 10:53 IST
Last Updated 17 ಮಾರ್ಚ್ 2014, 10:53 IST

ಕನಕಪುರ: ‘ಕೇಂದ್ರದಲ್ಲಿ ಯಾವುದೇ ಕಾರಣಕ್ಕೂ ಬಿ.ಜೆ.ಪಿ. ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ, ಕಳೆದ 10 ವರ್ಷಗಳಿಂದ ಉತ್ತಮ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಪಕ್ಷವನ್ನೇ ದೇಶದ ಜನತೆ ಮರು ಆಯ್ಕೆ ಮಾಡುತ್ತಾರೆ’ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು. 

ಪಟ್ಟಣದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಪಾದಯಾತ್ರೆ ನಡೆಸಿದ ಅವರು ಕೆ.ಎನ್‌.ಎಸ್‌. ವೃತ್ತದಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ­ಕೈಗೊಂಡಿರುವ ಜನಪರ ಯೋಜನೆಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಭಾರತ ನಿರ್ಮಾಣ ಪಾದಯಾತ್ರೆಯನ್ನು ನಡೆಸಲಾಗುತ್ತಿದೆ ಎಂದರು.

ಬಿ.ಜೆ.ಪಿ. ಮತ್ತು ಜೆ.ಡಿ.ಎಸ್‌ ಪಕ್ಷದ ಹಲವು ನಾಯಕರು ಕಾಂಗ್ರೆಸ್‌ ಪಕ್ಷಕ್ಕೆ ಬರಲು ಒಲವು ತೋರಿದ್ದಾರೆ. ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಬರುವುದಾದರೆ ಅವರನ್ನು ಸ್ವಾಗತಿಸುವುದಾಗಿ ತಿಳಿಸಿದರು.

‘ಚುನಾವಣೆಯನ್ನು ಮುಂದಿ­ಟ್ಟುಕೊಂಡು ನನ್ನ ವಿರುದ್ಧ ವಿರೋ­ಧಿಗಳು ಷಡ್ಯಂತ್ರ ನಡೆಸುತ್ತಿದ್ದಾರೆ. ನಾವು ಮಾಡಿರುವ ಅಭಿವೃದ್ಧಿ ಕೆಲಸಗಳು ನಮಗೆ ಶ್ರೀರಕ್ಷೆಯಾಗಲಿದೆ’ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರವಿ, ಪುರಸಭೆ ಮಾಜಿ ಅಧ್ಯಕ್ಷ ಆರ್.ಕೃಷ್ಣಮೂರ್ತಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಂ.ಡಿ.ವಿಜ­ಯದೇವ್, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ಎನ್.ದಿಲೀಪ್, ತಾಲ್ಲೂಕು ಪಂಚಾ­ಯಿತಿ ಮಾಜಿ ಅಧ್ಯಕ್ಷ ಪುರುಶೋತ್ತಮ್, ಲೋಕಸಭಾ ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ಕೆಂಪರಾಜು, ಟೌನ್‌ ಯುತ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ಆರ್‌.ಮಧು ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದru.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.