ADVERTISEMENT

ಕುಡಿಯುವ ನೀರು: ಜಾಗೃತೆವಹಿಸಿ

​ಪ್ರಜಾವಾಣಿ ವಾರ್ತೆ
Published 9 ಜನವರಿ 2012, 19:30 IST
Last Updated 9 ಜನವರಿ 2012, 19:30 IST

ದೊಡ್ಡಬಳ್ಳಾಪುರ: ಕುಡಿಯುವ ನೀರಿನ ಬಗ್ಗೆ ಸಾಕಷ್ಟು ಜಾಗ್ರತೆ ವಹಿಸಿದರೆ, ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಲು ಸಾಧ್ಯ ಎಂದು  ಭಾರತ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಸಂಯೋಜಕಿ ಚಂದ್ರಿಕಾ ಹೇಳಿದರು. 

ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಸೋಮವಾರ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಕುಡಿಯುವ ನೀರಿನ ಮಹತ್ವ ಕುರಿತು ನಡೆದ ಕಾರ್ಯಾಗಾರದಲ್ಲಿ  ಮಾತನಾಡಿದರು. 

್ರಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಇವರು ಸಮುದಾಯದ ಸಹಕಾರ ಪಡೆದು ಗ್ರಾಮಗಳಲ್ಲಿ ಆರೋಗ್ಯಕರ ವಾತಾವರಣ ನಿರ್ಮಿಸಲು ಯೋಜನೆ ರೂಪಿಸಲಿದ್ದಾರೆ ಎಂದರು.

ಕಾರ್ಯಾಗಾರದಲ್ಲಿ ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿರಾಜು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಎಸ್.ಶಶಿಧರ್, ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯದರ್ಶಿ ಸಿ.ಎಚ್.ರಾಮಕೃಷ್ಣಯ್ಯ  ಹಾಜರಿದ್ದರು. ಕೋಡಿಹಳ್ಳಿ ಗ್ರಾಮದಲ್ಲಿ ನಡೆದ ಮತ್ತೊಂದು ಕಾರ್ಯಾಗಾರದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಸಂಯೋಜಕರಾದ ಪಿ.ಮಹಮದ್, ತಾಲ್ಲೂಕು ಸಂಯೋಜಕ ಲಕ್ಷ್ಮೀಶ್, ಭಕ್ತರಹಳ್ಳಿ ಗ್ರಾ.ಪಂ ಅಧ್ಯಕ್ಷೆ ಜಯಲಕ್ಷ್ಮಮ್ಮ ಮುಂತಾದವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.