ADVERTISEMENT

ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2017, 6:18 IST
Last Updated 14 ಡಿಸೆಂಬರ್ 2017, 6:18 IST
ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಗೆ ಸಿದ್ಧತೆ
ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಗೆ ಸಿದ್ಧತೆ   

ದೊಡ್ಡಬಳ್ಳಾಪುರ: ತಾಲ್ಲೂಕಿನ ಐತಿಹಾಸಿಕ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದನಗಳ ಜಾತ್ರೆಗೆ ಸಿದ್ಧತೆಗಳು ಪ್ರಾರಂಭವಾಗಿದ್ದು ಎತ್ತುಗಳನ್ನು ಕಟ್ಟಲು ರೈತರು ಪೆಂಡಾಲ್‌ ಹಾಕುತ್ತಿದ್ದಾರೆ.

ಜಾತ್ರೆಗೆ ಬರುವ ಜನ, ಜಾನುವಾರುಗಳಿಗೆ ಅಗತ್ಯ ಇರುವ ಕುಡಿಯುವ ನೀರು, ಸ್ವಚ್ಛತೆ, ಬೀದಿ ದೀಪ ಸೇರಿದಂತೆ ಇತರೆ ಮೂಲಸೌಲಭ್ಯಗಳನ್ನು ಕಲ್ಪಿಸಲು ದೇವಾಲಯ ಸಮಿತಿ ಈಗಾಗಲೇ ಸಿದ್ಧತೆಗಳನ್ನು ನಡೆಸಿದೆ.

ಜಾತ್ರೆಗೆ ಎತ್ತುಗಳು ಬರಲು ಆರಂಭವಾಗಿದ್ದು ತುಂಬು ಜಾತ್ರೆಗೆ ಇನ್ನು ಮೂರು ದಿನ ಬೇಕಾಗಲಿದೆ ಎನ್ನುತ್ತಾರೆ ಎತ್ತುಗಳೊಂದಿಗೆ ಜಾತ್ರೆಗೆ ಬಂದಿರುವ ತಾಲ್ಲೂಕಿನ ಸಾಸಲು ಹೋಬಳಿಯ ರೈತರು. ಡಿ.24ರಂದು ಬೆಳಿಗ್ಗೆ 11ಕ್ಕೆ ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.