ADVERTISEMENT

ಡೇಟಾ ಎಂಟ್ರಿ ಹುದ್ದೆ: ಮೀಸಲಾತಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2017, 9:28 IST
Last Updated 26 ನವೆಂಬರ್ 2017, 9:28 IST

ದೇವನಹಳ್ಳಿ: ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಡೇಟಾ ಎಂಟ್ರಿ ಹುದ್ದೆಗೆ ನೇಮಕ ಪ್ರಕ್ರಿಯೆಗೆ ಆದೇಶ ನೀಡಿದ್ದು ಮೀಸಲಾತಿ ಅನ್ವಯ ಹುದ್ದೆ ಭರ್ತಿ ಮಾಡಬೇಕು ಎಂದು ಮಾದಿಗ ದಂಡೋರ ರಾಜ್ಯ ಘಟಕದ ಉಪಾಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ ಆಗ್ರಹಿಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಾತನಾಡಿ, ರಾಜ್ಯ ಸರ್ಕಾರ  ಹತ್ತು ದಿನಗಳ ಹಿಂದೆ ರಾಜ್ಯಾದ್ಯಂತ 6,022 ಡೇಟಾಎಂಟ್ರಿ ಆಪರೇಟರ್‌ ಹುದ್ದೆಯನ್ನು ತಾಲ್ಲೂಕು ಪಂಚಾಯಿತಿ ಮೂಲಕ ಭರ್ತಿ ಮಾಡಿಕೊಳ್ಳುವಂತೆ ಸೂಚಿಸಿದೆ. ಮೀಸಲಾತಿ ವರ್ಗೀಕರಣ ಮಾಡಿಲ್ಲ, ಎಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ಅರ್ಜಿಗಳನ್ನು ಅಧಿಕಾರಿಗಳು ಸ್ವೀಕರಿಸುತ್ತಿಲ್ಲ. ಬರಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು  ಅವರು ದೂರಿದರು.

ಒಟ್ಟು ಹುದ್ದೆಯಲ್ಲಿ ಮೀಸಲಾತಿ ನಿಯಮದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ18 ರಷ್ಟು ಹುದ್ದೆಗಳನ್ನು ಮೀಸಲಿಡಬೇಕು. ಸರ್ಕಾರ ಯಾವ ಕಾರಣಕ್ಕೆ ಮೀಸಲಾತಿ ನಿಯಮ ಪಾಲಿಸಿಲ್ಲ ಎಂಬುದು ಅರ್ಥವಾಗಿಲ್ಲ. ಮೀಸಲಾತಿ ಅಡಿ ಹುದ್ದೆ ನೇಮಕಾತಿ ಮಾಡದಿದ್ದರೆ ರಾಜ್ಯದ ಎಲ್ಲಾ ತಾಲ್ಲೂಕು ಪಂಚಾಯಿತಿ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ  ಎಚ್ಚರಿಕೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.