ADVERTISEMENT

ದೊಡ್ಡಬಳ್ಳಾಪುರ ಚೆಕ್‌ಪೋಸ್ಟ್‌ನಲ್ಲಿ 5 ಲಕ್ಷ ನಗದು ವಶ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2013, 13:15 IST
Last Updated 18 ಏಪ್ರಿಲ್ 2013, 13:15 IST

ದೊಡ್ಡಬಳ್ಳಾಪುರ: ಬೆಂಗಳೂರಿನಿಂದ ದೊಡ್ಡಬಳ್ಳಾಪುರ ಮಾರ್ಗವಾಗಿ  ಗೌರಿಬಿದನೂರಿಗೆ ಕಾರಿನಲ್ಲಿ  ತೆಗೆದುಕೊಂಡು ಹೋಗುತ್ತಿದ್ದ 5 ಲಕ್ಷ ರೂ.ಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ಚೆಕ್‌ಪೋಸ್ಟ್ ಬಳಿ ತಪಾಸಣೆ ಸಮಯದಲ್ಲಿ ಪೊಲೀಸರಿಗೆ ಈ ಹಣ ಪತ್ತೆಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮಿನಾರಾಯಣ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.