ADVERTISEMENT

ನೀರಿನ ಸಮಸ್ಯೆ: ಜಿಲ್ಲಾಧಿಕಾರಿ ಭರವಸೆ:ಇಪ್ಪತ್ತು ಕೊಳವೆ ಬಾವಿ ಕೊರೆಯಲು ಅನುಮತಿ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2012, 19:30 IST
Last Updated 15 ಮಾರ್ಚ್ 2012, 19:30 IST

ಆನೇಕಲ್: ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ 20 ಕೊಳವೆ ಬಾವಿಗಳನ್ನು ಕೊರೆಯಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಎಂ.ಕೆ.ಅಯ್ಯಪ್ಪ ನುಡಿದರು.
ಪಟ್ಟಣದ ಪುರಸಭಾ ಕಚೇರಿಯಲ್ಲಿ ವಿಶ್ವ ತೇವ ಭೂಮಿ ದಿನದ ಅಂಗವಾಗಿ ಬುಧವಾರ  ಆಯೋಜಿಸಿದ್ದ ಘನ ಹಾಗೂ ದ್ರವ್ಯ ತ್ಯಾಜ್ಯ ನಿರ್ವಹಣಾ ಕಾರ್ಯಗಾರದ ಉದ್ಘಾಟಿಸಿ ಅವರು ಮಾತನಾಡಿದರು.

ಕುಡಿಯುವ ನೀರಿನ ಪೈಪ್‌ಲೈನ್ ಹಾಗೂ ಪಂಪ್‌ಸೆಟ್‌ಗಳಿಗೆ ಹಣಕಾಸು ನೆರವು ನೀಡಲು ಜಿಲ್ಲಾಡಳಿತ ಸಿದ್ಧವಿದೆ. ಪುರಸಭೆಯು ವಿಶೇಷ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಅನುದಾನ ಬಿಡುಗಡೆ ಮಾಡಲು ಚರ್ಚಿಸಲಾಗುವುದು ಎಂದು ಹೇಳಿದರು.

ಕೆರೆಗಳು ಇತ್ತೀಚಿನ ದಿನಗಳಲ್ಲಿ ಮಲಿನಗೊಳ್ಳುತ್ತಿದ್ದು ಮುಂಬರುವ ದಿನಗಳಲ್ಲಿ ಕಲುಷಿತ ನೀರು ಕುಡಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಅವರು ಎಚ್ಚರಿಸಿದರು. ಸ್ಥಳೀಯ ಸಂಸ್ಥೆಗಳು ತ್ಯಾಜ್ಯ ವಸ್ತುಗಳನ್ನು ಕೆರೆಗಳಿಗೆ ಹಾಕದಂತೆ ಎಚ್ಚರಿಕೆ ವಹಿಸಬೇಕು. ಘನ ತ್ಯಾಜ್ಯ ನಿರ್ವಹಣೆಯ ಬಗ್ಗೆ ವೈಜ್ಞಾನಿಕ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಕರ್ನಾಟಕ ಹೈಕೋರ್ಟ್ ಕಾನೂನು ಸೇವಾ ಸಮಿತಿ ಲೋಕ ಅದಾಲತ್ ಸದಸ್ಯ ಎ.ಎನ್.ಯಲ್ಲಪ್ಪರೆಡ್ಡಿ ಮಾತನಾಡಿ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ಪುರಸಭೆಯು ಗಿಡ ಮರಗಳನ್ನು ಬೆಳೆಸುವ ಹಾಗೂ ಸಂರಕ್ಷಿಸುವ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.ಪುರಸಭೆ ಅಧ್ಯಕ್ಷೆ ಉಮಾ ಗೋಪಿ, ಉಪಾಧ್ಯಕ್ಷ ಶ್ರೆನಿವಾಸ್ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.