ADVERTISEMENT

ಪರಿಷ್ಕೃತ ಮತದಾರರ ಪಟ್ಟಿ ಸಿದ್ಧ

ಹೊಸ ಮತದಾರರಿಗೆ ಗುರುತಿನ ಚೀಟಿ ಮಾರ್ಚ್‌ಗೆ ವಿತರಣೆ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2018, 7:33 IST
Last Updated 2 ಮಾರ್ಚ್ 2018, 7:33 IST
ಪರಿಷ್ಕೃತ ಮತದಾರರ ಪಟ್ಟಿಯನ್ನು ರಾಜಕೀಯ ಮುಖಂಡರಿಗೆ ಉಪವಿಭಾಗಾಧಿಕಾರಿ ಎಸ್‌.ಮಹೇಶ್‌ ಬಾಬು ವಿತರಿಸಿದರು
ಪರಿಷ್ಕೃತ ಮತದಾರರ ಪಟ್ಟಿಯನ್ನು ರಾಜಕೀಯ ಮುಖಂಡರಿಗೆ ಉಪವಿಭಾಗಾಧಿಕಾರಿ ಎಸ್‌.ಮಹೇಶ್‌ ಬಾಬು ವಿತರಿಸಿದರು   

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ 4ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟಣೆಯಾಗಿದೆ. ಒಟ್ಟು 8,09,667 ಮತದಾರರಿದ್ದಾರೆ. ಈ ಪೈಕಿ 4,07,920 ಪುರುಷ, 4,01,670 ಮಹಿಳಾ ಮತ್ತು 77 ಇತರೆ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಪಾಲಯ್ಯ ತಿಳಿಸಿದ್ದಾರೆ.

ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ ಒಟ್ಟು 26,618 ಹೊಸ ಅರ್ಹ ಮತದಾರರು ಸೇರ್ಪಡೆಗೊಂಡಿದ್ದಾರೆ ಎಂದು ತಿಳಿಸಿದರು.

ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ಒಟ್ಟು 40,707 ಜನರ ಹೆಸರು ಕೈಬಿಡಲಾಗಿದೆ. ವಿಳಾಸ, ಭಾವಚಿತ್ರ ಇತರೆ ಮಾಹಿತಿ ಬದಲಾವಣೆ ಕೋರಿ ಸಲ್ಲಿಸಿದ್ದ ಒಟ್ಟು 25,881 ತಿದ್ದುಪಡಿ, ವರ್ಗಾವಣೆ ಅರ್ಜಿಗಳನ್ನು ಪುರಸ್ಕರಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ರಾಜ್ಯ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2018ರಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ವಿಧಾನಸಭಾ ಕ್ಷೇತ್ರಗಳ ಅಂತಿಯ ಮತದಾರರ ಪಟ್ಟಿಯನ್ನು ಫೆ.28ರಂದು ಪ್ರಕಟಿಸಲಾಗಿದೆ ಎಂದರು.

ಪ್ರಕಟಗೊಂಡ ಪಟ್ಟಿಯು ಸಂಬಂಧಪಟ್ಟ ಮತಗಟ್ಟೆಗಳಲ್ಲಿ, ತಾಲ್ಲೂಕು ತಹಶೀಲ್ದಾರ್‌ರವರ ಕಚೇರಿ, ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಲಭ್ಯವಿದೆ. ಮತದಾರರ ಪಟ್ಟಿಯಲ್ಲಿ ಮಾಹಿತಿ ,ಭಾವಚಿತ್ರ ಸರಿಯಾಗಿ ಮುದ್ರಣವಾಗಿರುವ ಬಗ್ಗೆ ಸಾರ್ವಜನಿಕರು ಪರಿಶೀಲಿಸಿಕೊಳ್ಳಬಹುದು ಎಂದು ತಿಳಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಿರಂತರವಾಗಿ ಮುಂದುವರೆಯಲಿದೆ. ಹೆಸರು ನೋಂದಾಯಿಸದೆ ಇರುವವರು ಹಾಗೂ ಪಟ್ಟಿಯಲ್ಲಿ ತಿದ್ದುಪಡಿ ಮಾಡಲು ಅವಕಾಶವಿದೆ ಎಂದರು.

ಹೊಸ ಹೆಸರು ನೋಂದಣಿಗೆ ನಮೂನೆ–6 ಹಾಗೂ ತಿದ್ದುಪಡಿಗೆ ನಮೂನೆ–8ನ್ನು ದ್ವಿಪ್ರತಿಯಲ್ಲಿ ಪೂರಕ ದಾಖಲೆಯೊಂದಿಗೆ ಸಂಬಂಧಪಟ್ಟ ಬಿಎಲ್‌ಒಗೆ ಅಥವಾ ತಾಲ್ಲೂಕು ಕಚೇರಿಗೆ ಸಲ್ಲಿಸಬಹುದಾಗಿದೆ ಎಂದರು.

ಈಗಾಗಲೇ ನೋಂದಾಯಿಸಿ ಕೊಂಡಿರುವ ಹೊಸ ಮತದಾರರಿಗೆ ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿಯನ್ನು 2018 ಮಾರ್ಚ್‌ ತಿಂಗಳಲ್ಲಿ ವಿತರಿಸಲಾಗುವುದು ಎಂದರು.

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಉಪವಿಭಾಗಾಧಿಕಾರಿ ಎಸ್‌.ಮಹೇಶ್‌ಬಾಬು ಅವರು ಮತದಾರರ ಪರಿಷ್ಕೃತ ಅಂತಿಮ ಪಟ್ಟಿ ವಿತರಣೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.