ADVERTISEMENT

ಪರಿಸರ ಪ್ರೇಮ ಮೆರೆದ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 13 ಜೂನ್ 2015, 6:40 IST
Last Updated 13 ಜೂನ್ 2015, 6:40 IST
ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಮನುಜಮತ ವಿಶ್ವಪಥ’ ಯುವ ವೇದಿಕೆ ವತಿಯಿಂದ  ಕಾಲೇಜಿನ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.
ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಮನುಜಮತ ವಿಶ್ವಪಥ’ ಯುವ ವೇದಿಕೆ ವತಿಯಿಂದ ಕಾಲೇಜಿನ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.   

ದೊಡ್ಡಬಳ್ಳಾಪುರ:  ನಗರೀಕರಣದ ಪ್ರಭಾವದಿಂದ ಉಂಟಾದ ಪರಿಸರ ಮಾಲಿನ್ಯದಿಂದಾಗಿ ಇಂದು ಅಸ್ತಮಾ, ಉಸಿರಾಟ ತೊಂದರೆ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಸ್.ಪಿ.ರಾಜಣ್ಣ ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮನುಜಮತ ವಿಶ್ವಪಥ ಯುವ ವೇದಿಕೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ನಡೆದ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಮ್ಮ ಸುತ್ತ ಮುತ್ತ ಪರಿಸರವನ್ನು ಕಾಪಾಡಿಕೊಳ್ಳುವ ಮೂಲಕ ಗಿಡಮರ ಬೆಳೆಸುವಲ್ಲಿ ಇಂದಿನ ಪೀಳಿಗೆ ಆಸಕ್ತಿ ವಹಿಸಬೇಕು ಎಂದು ಸಲಹೆ ನೀಡಿದರು.
ಹವಾಮಾನ ವೈಪರಿತ್ಯಗಳಿಂದಾಗಿ ವಿಶ್ವದಲ್ಲಿ ಅನೇಕ ವಿಸ್ಮಯಗಳನ್ನು    ಕಾಣುವಂತಾಗಿದೆ ಎಂದು ತಿಳಿಸಿದರು.

ಭೂತಾಪಮಾನ, ಉಷ್ಣ ವಾತಾವರಣ ಮೊದಲಾಗಿ ಜೀವಿಗಳಿಗೆ ಮಾರಕವಾದ ವಾತಾವರಣ ಮೂಡಲು ಮನುಷ್ಯನ ದುರಾಸೆಯೇ ಕಾರಣವಾಗಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳದಿದ್ದರೆ ಮುಂದಿನ ಪರಿಸ್ಥಿತಿ ಭೀಕರವಾಗಿರುತ್ತದೆ ಎಂದು ಅವರು ವಿವರಿಸಿದರು.

ಕಾಲೇಜಿನ ಆವರಣದಲ್ಲಿ ಹಲವಾರು ಸಸಿಗಳನ್ನು ನೆಡಲಾಯಿತು. ಇದೇ ವೇಳೆ ಅಂತಿಮ ಬಿ.ಎ. ವಿದ್ಯಾರ್ಥಿಗಳನ್ನು ಬೀಳ್ಕೊಡಲಾಯಿತು. ವಿದ್ಯಾರ್ಥಿಗಳಿಗೆ ಸಸಿ ನೆಟ್ಟ ನೆನಪಿಗಾಗಿ ಅಭಿನಂದನಾ          ಪತ್ರಗಳನ್ನು ವಿತರಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಡಿ.ಶ್ರೀಕಾಂತ, ಕನ್ನಡ ವಿಭಾಗದ ಮುಖ್ಯಸ್ಥ ಸಿ. ರಾಮಚಂದ್ರ, ಉಪನ್ಯಾಸಕ ಪ್ರವೀಣ್ ಭಾಗವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT