ADVERTISEMENT

ಪರೀಕ್ಷೆ ಸಂದರ್ಭದಲ್ಲಿ ಕಾಲಾಹರಣ ಸಲ್ಲದು

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2011, 9:10 IST
Last Updated 14 ಮಾರ್ಚ್ 2011, 9:10 IST

ದೇವನಹಳ್ಳಿ: ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆ ಸಂದರ್ಭದಲ್ಲಿ ಕಾಲವನ್ನು ವ್ಯರ್ಥಮಾಡದೆ ಪರಿಶ್ರಮದಿಂದ ಅಧ್ಯಯನ ಕೈಗೊಳ್ಳಬೇಕು  ಎಂದು ವಕೀಲ ರಾಜೇಶ್ ಸಲಹೆ ನೀಡಿದರು.
ಗುರುಭವನದಲ್ಲಿ ಶಿಕ್ಷಣ ಇಲಾಖೆಯ ಪರಿಶಿಷ್ಟಜಾತಿ ಮತ್ತು ಪಂಗಡದ ನೌಕರರ ಕ್ಷೇಮಾಭಿವೃದ್ಧಿ ಸಂಘ, ದಲಿತ ಸಂಘರ್ಷ ಸಮಿತಿ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಮಾನಸಿಕ ಒತ್ತಡ ನಿವಾರಣೆ ಕಾರ್ಯಾಗಾರದಲ್ಲಿ ಮಾತನಾಡಿದರು.

ಶಿಸ್ತಿನಿಂದ ಪ್ರತಿ ವಿಷಯದ ಮೇಲೂ ಗಮನಹರಿಸಬೇಕು. ಉತ್ತಮ ಅಂಕಗಳಿಕೆಯಿಂದ ಪೋಷಕರಿಗೆ ಮತ್ತು ಶಾಲೆಗೆ ಕೀರ್ತಿ ತರಲು ಸಾಧ್ಯ ಎಂದರು.
ಚನ್ನಹಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ವೆಂಕಟೇಶ್ ಮಾತನಾಡಿ, ಶಿಕ್ಷಣ ಇಲಾಖೆಯ ಕಾರ್ಯಕ್ರಮಗಳನ್ನು ಕ್ಷೇಮಾಭಿವೃದ್ಧಿ ಸಂಘದ ಮೂಲಕ ಅನುಷ್ಠಾನಗೊಳಿಸಲು ತಾಲ್ಲೂಕಿನಲ್ಲಿ ಶೇ.50ರಷ್ಟು ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳನ್ನು ದತ್ತುಪಡೆಯಲಾಗಿದೆ.

ವಿದ್ಯಾರ್ಥಿಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಉಪ ಪ್ರಾಂಶುಪಾಲ ಕೆ.ಬಸವರಾಜು, ಎಸ್‌ಡಿಎಂಸಿ ಅಧ್ಯಕ್ಷ ನಂಜಪ್ಪ, ಸದಸ್ಯ ವೇಣುಗೋಪಾಲ್, ಸಂಪನ್ಮೂಲ ಶಿಕ್ಷಕಿ ಶಾರದಾ ಬಾಯಿ, ಶಿಕ್ಷಕ ಲಿಂಗಪ್ಪ ಕೆಂದೂರ್, ಡಿಎಸ್‌ಎಸ್ ಉಪ ಪ್ರಧಾನ ಸಂಚಾಲಕ ತಿಮ್ಮರಾಯಪ್ಪ, ಡಿಎಸ್‌ಎಸ್ ವಿದ್ಯಾರ್ಥಿ ಒಕ್ಕೂಟ ಸಂಚಾಲಕ ಮಹೇಶ್ ದಾಸ್, ವಕೀಲ ಹರೀಶ್ ಹಾಜರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಾಮಗ್ರಿ ವಿತರಿಸಲಾಯಿತು      

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.