ADVERTISEMENT

ಪೆಟ್ರೋಲ್ ಬೆಲೆ ಏರಿಕೆ ಅನಿವಾರ್ಯ: ಮೊಯಿಲಿ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2013, 9:10 IST
Last Updated 2 ಸೆಪ್ಟೆಂಬರ್ 2013, 9:10 IST

ದೇವನಹಳ್ಳಿ: `ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಹಾಗೂ ಅಂತರರಾಷ್ಟ್ರೀಯ ತೈಲ ಬೆಲೆ ಹೆಚ್ಚಳದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಅನಿವಾರ್ಯವಾಗಿ ಏರಿಕೆ ಮಾಡಲಾಗಿದೆ' ಎಂದು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಡಾ.ಎಂ.ವೀರಪ್ಪ ಮೊಯಿಲಿ ತಿಳಿಸಿದರು.

ದೇವನಹಳ್ಳಿ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕುಂದು ಕೊರತೆ ಸಭೆಯ ಮೊದಲು ಮಾತನಾಡಿದ ಅವರು, `ಪೆಟ್ರೋಲಿಯಂ ಉತ್ಪನ್ನ ವಸ್ತುಗಳು ಅಡುಗೆ ಅನಿಲ ಬೆಲೆ ಹೆಚ್ಚಿಸದಿದ್ದರೆ ಈಗಿನ ಅಂತರರಾಷ್ಟ್ರೀಯ ಬೆಲೆಗಳ ಲೆಕ್ಕದಲ್ಲಿ ತೈಲ ಕಂಪೆನಿಗಳು ಲಕ್ಷಾಂತರ ಕೋಟಿ ನಷ್ಟ ಅನುಭವಿಸಲಿದೆ. ಡೀಸೆಲ್ ಮತ್ತು ಅಡುಗೆ ಅನಿಲ ರಿಯಾಯಿತಿ ಬಾಬ್ತು ಒಂದು ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹೊರೆ ಬೀಳಲಿದೆ' ಎಂದರು.

ಎತ್ತಿನ ಹೊಳೆ ಯೋಜನೆ ಕುರಿತು ಪ್ರಸ್ತಾಪಿಸಿದ ಅವರು, ಯೋಜನೆಗೆ ಈಗಾಗಲೆ ಟೆಂಡರ್ ಕರೆಯಲಾಗಿದೆ. ಪೈಪ್‌ಲೈನ್ ಮತ್ತು ಕೆಲವು ಕಡೆ ತೆರೆದ ಕಾಲುವೆ ಮೂಲಕ ನೀರು ಹರಿಸಬೇಕು. ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಶಂಕು ಸ್ಥಾಪನೆಗೆ ದಿನಾಂಕ ನಿಗದಿಗೊಳಿಸಲಾಗುವುದು ಎಂದರು. ಕೇಂದ್ರ ಸರ್ಕಾರ ಭೂ ಕಾಯ್ದೆ ವಿಧೇಯಕ ಮಂಡಿಸಿದೆ. ಇದರಿಂದ ಭೂ ಸ್ವಾಧೀನಕ್ಕೆ ಒಳಪಡುವ ರೈತರ ಭೂಮಿಗೆ ಉತ್ತಮ ಬೆಲೆ ಸಿಗಲಿದೆ ಎಂದರು.

ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಜಿ.ಪಂ.ಸದಸ್ಯ ಬಿ.ರಾಜಣ್ಣ, ಮಾಜಿ ಶಾಸಕ ಕೆ.ವೆಂಕಟಸ್ವಾಮಿ, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಆರ್.ಬಚ್ಚೇಗೌಡ, ಪರಿಶಿಷ್ಠ ಜಾತಿ ಜಿಲ್ಲಾ ಕಾಂಗ್ರೆಸ್ ಘಟಕದ ಎ.ಚಿನ್ನಪ್ಪ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಆರ್.ರವಿಕುಮಾರ್, ತಾಲ್ಲೂಕು ಅಧ್ಯಕ್ಷ ಕೆ.ಶ್ರಿನಿವಾಸಗೌಡ, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಜಗನ್ನಾಥ್,

ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿನಾರಾಯಣ, ಕುಂದಾಣ ಹೋಬಳಿ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಪ್ಪಣ್ಣ, ಪುರಸಭೆ ಸದಸ್ಯ ರಘು, ಮಂಜುನಾಥ್, ಪುರಸಭೆ ಮಾಜಿ ಅಧ್ಯಕ್ಷ ಎಕ್ಬಾಲ್ ಹುಸೇನ್, ತಾ.ಪಂ.ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮುನಿರಾಜು, ಟೌನ್ ಕಾಂಗ್ರೆಸ್ ಅಧ್ಯಕ್ಷ ದಿ.ಎಸ್.ಸಿ.ಚಂದ್ರಪ್ಪ, ಕಸಬಾ ಹೋಬಳಿ ಕಾಂಗ್ರೆಸ್ ಪರಿಶಿಷ್ಠ ಜಾತಿ ಘಟಕ ಅಧ್ಯಕ್ಷ ಪ್ರಕಾಶ್, ಕೃಷಿಕ ಸಮಾಜ ನಿರ್ದೇಶಕ ನಾಗೇಗೌಡ, ಮುಖಂಡ ಎಸ್.ಜಿ.ನಾರಾಯಣಸ್ವಾಮಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.