ADVERTISEMENT

ಬಮೂಲ್ ನೂತನ ಅಧ್ಯಕ್ಷರಾಗಿ ಬಿ.ಜಿ.ಆಂಜಿನಪ್ಪ ಆಯ್ಕೆ

​ಪ್ರಜಾವಾಣಿ ವಾರ್ತೆ
Published 7 ಜೂನ್ 2018, 6:26 IST
Last Updated 7 ಜೂನ್ 2018, 6:26 IST
ಬಮೂಲ್‌ನ ಅಧ್ಯಕ್ಷ ಬಿ.ಜಿ.ಆಂಜಿನಪ್ಪ ಅವರನ್ನು ಮುಖಂಡರು ಅಭಿನಂದಿಸಿದರು
ಬಮೂಲ್‌ನ ಅಧ್ಯಕ್ಷ ಬಿ.ಜಿ.ಆಂಜಿನಪ್ಪ ಅವರನ್ನು ಮುಖಂಡರು ಅಭಿನಂದಿಸಿದರು   

ಆನೇಕಲ್: ಬೆಂಗಳೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷ ಆನೇಕಲ್ ತಾಲ್ಲೂಕಿನ ಬಿದರಗುಪ್ಪೆಯ ಬಿ.ಜಿ. ಆಂಜಿನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಾಗಿದ್ದ ಅಪ್ಪಯ್ಯಣ್ಣ ರಾಜೀನಾಮೆಯಿಂದ ತೆರವಾಗಿದ್ದ ಈ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಿಗದಿಯಾಗಿತ್ತು.

ಬಿ.ಜಿ.ಆಂಜಿನಪ್ಪ ಮಾತನಾಡಿ, ಬಮೂಲ್‌ಗೆ ಹೊಸ ರೂಪ ನೀಡುವ ಗುರಿ ಹೊಂದಲಾಗಿದೆ. ₹500ಕೋಟಿ ವೆಚ್ಚದಲ್ಲಿ ಕನಕಪುರದಲ್ಲಿ ನಿರ್ಮಾಣವಾಗುತ್ತಿರುವ ಮೆಗಾ ಡೈರಿ ಶೀಘ್ರದಲ್ಲಿ ಪ್ರಾರಂಭವಾಗಲಿದೆ. ಇದರಿಂದಾಗಿ ಹಾಲಿನ ಉತ್ಪನ್ನಗಳನ್ನು ಹೆಚ್ಚು ಮಾಡಿ ಮಾರುಕಟ್ಟೆಯನ್ನು ವಿಸ್ತರಿಸಲು ಅನುಕೂಲವಾಗುತ್ತದೆ ಎಂದರು.

ADVERTISEMENT

ನಾಲ್ಕು ವರ್ಷಗಳಿಂದ ಲಾಭದಲ್ಲಿ ನಡೆಯುತ್ತಿರುವ ಬಮೂಲ್‌ನ್ನು ಮತ್ತಷ್ಟು ಲಾಭದಾಯಕವಾಗಿ ಮಾಡಿ ಮಾದರಿ ಒಕ್ಕೂಟವನ್ನಾಗಿ ಮಾಡಲು ಶ್ರಮಿಸುವುದಾಗಿ ತಿಳಿಸಿದರು.

ನೂತನ ಅಧ್ಯಕ್ಷ ಬಿ.ಜಿ.ಆಂಜಿನಪ್ಪ ಅವರನ್ನು ಬಿಜೆಪಿ ಮುಖಂಡ ಎ.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಮುನಿರಾಜು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ವಿ.ಆಂಜಿನಪ್ಪ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಅತ್ತಿಬೆಲೆ ಎನ್.ಬಸವರಾಜು, ಎಪಿಎಂಸಿ ನಿರ್ದೇಶಕ ಬಿ.ಬಿ.ಐ. ಮುನಿರೆಡ್ಡಿ ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.