ADVERTISEMENT

ಮತಪಟ್ಟಿ ಪರಿಷ್ಕರಣೆ ಕಾರ್ಯ ಆರಂಭ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2011, 19:30 IST
Last Updated 6 ಅಕ್ಟೋಬರ್ 2011, 19:30 IST

ವಿಜಯಪುರ: ಭಾವಚಿತ್ರವಿರುವ ಮತದಾರರಪಟ್ಟಿಯನ್ನು ಗ್ರಾಮಪಂಚಾಯ್ತಿ, ಸ್ಥಳೀಯ ಸಂಸ್ಥೆ ಹಾಗೂ ಇತರೆ ಗ್ರಾಮದ ಚಾವಡಿಗಳಲ್ಲಿ ನಿಗದಿಪಡಿಸಿರುವ ಮತಗಟ್ಟೆ ಅಧಿಕಾರಿಯು ಇದೇ ತಿಂಗಳ 10ರಂದು ಪರಿಶೀಲಿಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಕೆ.ರಾಜು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತವಿಭಾಗ- 178 ಹೊಸಕೋಟೆ, 179-ದೇವನಹಳ್ಳಿ, 180-ದೊಡ್ಡಬಳ್ಳಾಪುರ, ಮತ್ತು 181-ನೆಲಮಂಗಲ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಭಾವಚಿತ್ರವಿರುವ ಕರಡು ಮತದಾರರ ಪಟ್ಟಿಯನ್ನು ಇದೇ ತಿಂಗಳ 1ರಂದು ಪ್ರಕಟಿಸಲಾಗಿದೆ. ಭಾವಚಿತ್ರವಿರುವ ಮತದಾರರ ಪಟ್ಟಿಗೆ ಹೆಸರುಗಳ ಸೇರ್ಪಡೆ, ಪಟ್ಟಿಯಿಂದ ಹೆಸರು ತೆಗೆಯುವುದು, ತಿದ್ದುಪಡಿಯ ಬಗ್ಗೆ ಹಕ್ಕನ್ನು ಕೋರಿ ಅರ್ಜಿಗಳನ್ನು ನವಂಬರ್ 1 ರೊಳಗೆ ಸಲ್ಲಿಸಬಹುದು ಎಂದು ಅವರು ತಿಳಿಸಿದರು.

ಆಯಾ ಮಾಹಿತಿಗಾಗಿ ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿ ಅಥವಾ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಿ ಅಗತ್ಯ ನಮೂನೆಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.