ADVERTISEMENT

ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2011, 9:20 IST
Last Updated 14 ಮಾರ್ಚ್ 2011, 9:20 IST

ಆನೇಕಲ್: ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಮಂಜೂರಾತಿಗೆ ಸಚಿವ ಎ.ನಾರಾಯಣಸ್ವಾಮಿ ಅವರು ಕ್ರಮ ಕೈಗೊಳ್ಳಬೇಕು ಎಂದು ಪುರಸಭಾ ಸದಸ್ಯ ವಿ.ರಾಮಕೃಷ್ಣ ಒತ್ತಾಯಿಸಿದ್ದಾರೆ.

ಆನೇಕಲ್‌ನ 23 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ.  ಕೊಳವೆ ಬಾವಿಗಳು ಬತ್ತಿಹೋಗಿದ್ದು,  ನೀರಿನ ಸಮಸ್ಯೆ ಉಲ್ಬಣಿಸಿದೆ. ಕುಡಿಯುವ ನೀರಿನ ಯೋಜನೆಗಾಗಿ 3.ಕೋಟಿ ರೂಪಾಯಿಗಳ ಯೋಜನೆ ಯನ್ನು ಈ ಹಿಂದೆ ಕೈಗೊಳ್ಳಲಾಗಿತ್ತು. ಆದರೆ ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. 1998ರಲ್ಲಿ ಹೊಸೂರು ರಸ್ತೆಯಲ್ಲಿ ನಿರ್ಮಿಸಿರುವ ಓವರ್ ಹೆಡ್ ಟ್ಯಾಂಕ್ ಇಂದಿಗೂ ಕಾರ್ಯನಿರ್ವಹಿಸುತ್ತಿಲ್ಲ. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಜನ ಪ್ರತಿನಿಧಿಗಳು ಕ್ರಿಯಾ ಯೋಜನೆಯನ್ನು ರೂಪಿಸಿ ಬೇಸಿಗೆಯ ಅವಧಿಯ ಸಮಸ್ಯೆ ನಿಭಾಯಿಸಲು ಚಿಂತನೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಇಲ್ಲಿನ ನಾಗರಿಕರು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದರೂ ಮುತ್ಯಾಲಮಡುವು ಯೋಜನೆಗೆ ಸಚಿವರು ಕಾಳಜಿ ತೋರಿ 5 ಕೋಟಿ ರೂ. ಮಂಜೂರು ಮಾಡಿಸಿದ್ದಾರೆ. ಇದಕ್ಕಿಂತಲೂ ಮುಖ್ಯವಾದ ಪಟ್ಟಣದ ಜನತೆಯ ದಿನ ನಿತ್ಯದ ಸಮಸ್ಯೆಯಾದ ಕುಡಿಯುವ ನೀರಿನ ಪೂರೈಕೆಗೆ ನೂತನ ಯೋಜನೆ ಮಂಜೂರು ಮಾಡಿಸಲು ಆದ್ಯತೆ ನೀಡಬೇಕು.
ಕೊಳವೆ ಬಾವಿಗಳನ್ನು ಕೊರೆಯಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.