ADVERTISEMENT

ಶಿಕ್ಷಣ ಕ್ಷೇತ್ರಕ್ಕೆ ಕಾರ್ಪೋರೇಟ್ ವಲಯದ ಆರು ಕೋಟಿ ಹಣ ಬಳಕೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2013, 6:31 IST
Last Updated 9 ಜುಲೈ 2013, 6:31 IST

ದೊಡ್ಡಬಳ್ಳಾಪುರ: `ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶೈಕ್ಷಣಿಕ ಮೂಲ ಸೌಕರ್ಯಕ್ಕೆ ಸರ್ಕಾರದ ಸರ್ವ ಶಿಕ್ಷಣ ಅಭಿಯಾನದ ಅನುದಾನದ ಜೊತೆಗೆ 6 ಕೋಟಿಗಳಿಗೂ ಅಧಿಕ ಹಣವನ್ನು ಕಾರ್ಪೋರೇಟ್ ವಲಯದಿಂದ ಪಡೆದು ಬಳಸಿಕೊಳ್ಳಲಾಗಿದೆ' ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ವಿ.ವೆಂಕಟೇಶಪ್ಪ ತಿಳಿಸಿದರು.

ಶಿಕ್ಷಕರ ಕಲ್ಯಾಣನಿಧಿ ಉಪನಿರ್ದೇಶಕರಾಗಿ ವರ್ಗಾವಣೆಗೊಂಡ ಅಂಗವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಸಿಬ್ಬಂದಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ತಾಲ್ಲೂಕು ಶಿಕ್ಷಕರ ಸಂಘಗಳ ವತಿಯಿಂದ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

`ಕಳೆದ ನಾಲ್ಕು ವರ್ಷಗಳಿಂದ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸಿದ ತೃಪ್ತಿ ಇದೆ ಎಂದ ಅವರು ಈ ಸಂದರ್ಭದಲ್ಲಿ ಸಹಕರಿಸಿದ ಎಲ್ಲ ಶಿಕ್ಷಕರು ಹಾಗೂ ಸಿಬ್ಬಂದಿಯನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಉಪನಿರ್ದೇಶಕ (ಶೈಕ್ಷಣಿಕ) ಮಾದೇಗೌಡ, ನಿವೃತ್ತ ನಿರ್ದೇಶಕರಾದ ಕೆ.ಗಂಗಪ್ಪಗೌಡ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಜಿ.ಭೀಮರಾಜು, ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್.ಸಿದ್ದಗಂಗಯ್ಯ, ಉಪಾಧ್ಯಕ್ಷ ಬಸವಲಿಂಗಯ್ಯ, ಕಾರ್ಯದರ್ಶಿ ಕೆ.ಮಲ್ಲಿಕಾಜುನ ರೆಡ್ಡಿ, ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ತಾಲ್ಲೂಕು ಶಿಕ್ಷಕರ ಸಂಘಗಳ ಪದಾಧಿಕಾರಿಗಳು, ಶಿಕ್ಷಣಾಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.