ದೊಡ್ಡಬಳ್ಳಾಪುರ: ‘ಗ್ರಾಮೀಣ ಪ್ರದೇಶದಲ್ಲಿ ಮಾತ್ರವೇ ಇಂದಿಗೂ ದೇಶಿ ಸಂಸ್ಕೃತಿ ಮತ್ತು ಪರಂಪರೆ ಉಳಿದಿದೆ’ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.
ತಾಲ್ಲೂಕಿನ ಮಧುರೆ ಹೋಬಳಿ ಮಾರಸಂದ್ರ ಗ್ರಾಮದಲ್ಲಿ ಕೊಂಡದಮ್ಮ ಸೇವಾ ಸಮಿತಿ ವತಿಯಿಂದ ನಡೆದ ಜಾತ್ರಾ ಮಹೋತ್ಸವದಲ್ಲಿ ಅವರು ಮಾತನಾಡಿದರು.
‘ಸಂಸ್ಕೃತಿಯ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಗ್ರಾಮೀಣರು ನಡೆಸಬೇಕು’ ಎಂದು ಅವರು ತಿಳಿಸಿದರು.
ಇದೇ ವೇಳೆ ನೀರಿನ ಸಮಸ್ಯೆ ಕುರಿತು ಪ್ರಸ್ತಾಪಿಸಿದ ಅವರು, ನೀರಿನ ಬವಣೆ ನೀಗಿಸಲು ತಾಲ್ಲೂಕಿನಾದ್ಯಂತ ಈಗಾಗಲೇ 180 ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಬೇಕು. ಸೋಮವಾರ (ಮಾ.3)ರಂದು ನಡೆಯುವ ಎತ್ತಿನ ಹೊಳೆ ಯೋಜನೆಯ ಶಂಕುಸ್ಥಾಪನೆಯಲ್ಲಿ ಪಕ್ಷಾತೀತವಾಗಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ಸಿ.ಡಿ.ಸತ್ಯನಾರಾಯಣಗೌಡ, ಜಿ.ಪಂ. ಮಾಜಿ ಸದಸ್ಯ ಆರ್.ದಯಾನಂದ ಸ್ವಾಮಿ, ಭೂ ಮಂಜೂರಾತಿ ಮಾಜಿ ಸದಸ್ಯ ಕೆ.ವಿ.ಪ್ರಕಾಶ್, ಆರಾಧನಾ ಸಮಿತಿ ಮಾಜಿ ಸದಸ್ಯ ಸಿದ್ದಲಿಗಸ್ವಾಮಿ, ಜಾತ್ರಾ ಮಹೋತ್ಸವದ ವ್ಯವಸ್ಥಾಪಕ ವಿರೂಪಾಕ್ಷಯ್ಯ, ಮಲ್ಲಯ್ಯ ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.