ADVERTISEMENT

ಸರ್ಕಾರಿ ಭೂಮಿ ಅತಿಕ್ರಮಣ ಆರೋಪ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2012, 19:30 IST
Last Updated 2 ಫೆಬ್ರುವರಿ 2012, 19:30 IST

ಆನೇಕಲ್: ತಾಲ್ಲೂಕಿನ ಇಗ್ಗಲೂರು ಗ್ರಾಮದಲ್ಲಿನ ಕೋಟ್ಯಂತರ ರೂ. ಬೆಲೆ ಬಾಳುವ ನಾಲ್ಕು ಎಕರೆ ಸರ್ಕಾರಿ ಭೂಮಿಯನ್ನು ಖಾಸಗಿ ಡೆವಲಪರ್‌ಗಳು ಅತಿಕ್ರಮಿಸಿ ಬಡಾವಣೆ ನಿರ್ಮಿಸಿದ್ದಾರೆ ಎಂದು ಜೆಡಿಎಸ್‌ನ ತಾಲ್ಲೂಕು ಮಹಾ ಪ್ರಧಾನ ಕಾರ್ಯದರ್ಶಿ ಪಟಾಪಟ್ ರವಿ ಆರೊಪಿಸಿದ್ದಾರೆ.

ಅವರು ಇಗ್ಗಲೂರು ಬಳಿ ಸರ್ಕಾರಿ ಭೂಮಿ ಅತಿಕ್ರಮಣ ಮಾಡಿರುವುದನ್ನು ವಿರೋಧಿಸಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಸೂರ್ಯಸಿಟಿಗೆ ಹೊಂದಿಕೊಂಡಂತಿರುವ ಮತ್ತಿಕೆರೆ ಕಟ್ಟೆ ಎಂದು ಕರೆಯುವ ನಂಬರ್ ಕಾಣದ ನಾಲ್ಕು ಎಕರೆ ಸರ್ಕಾರಿ ಭೂಮಿಯನ್ನು ಡೆವಲಪರ್ ಕೃಷ್ಣಾ ರೆಡ್ಡಿ ಎಂಬುವರು ಅತಿಕ್ರಮಿಸಿ ಬಡಾವಣೆ ನಿರ್ಮಿ ಸುತ್ತಿದ್ದಾರೆ ಎಂದು ರವಿ ಆರೋಪಿಸಿದ್ದಾರೆ. ಸರ್ಕಾರ ಈ ಜಾಗವನ್ನು ತನ್ನ ವಶಕ್ಕೆ ತೆಗೆದುಕೊಂಡು ಆಶ್ರಯ ಸಮಿತಿಗೆ ನೀಡಿ ಬಡವರಿಗೆ ನಿವೇಶನ ಹಂಚಬೇಕೆಂದು ಅವರು ಒತ್ತಾಯಿಸಿದರು.

ಆನೇಕಲ್ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಟರಾಜ್ ಶೆಟ್ಟಿ, ರಾಜಸ್ವ ನಿರೀಕ್ಷಕ ಮಹೇಶ್ ಮನವಿ ಪತ್ರ ಪಡೆದು ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಜೆಡಿಎಸ್ ಯುವ ಘಟಕದ ತಾಲ್ಲೂಕು ಅಧ್ಯಕ್ಷ ಎನ್.ಎಸ್.ಅಶ್ವಥ್ ನಾರಾಯಣ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಮೂರ್ತಿ, ಮಾಜಿ ಅಧ್ಯಕ್ಷೆ ನಾಗರತ್ನಮ್ಮ, ಶ್ರೀನಿವಾಸ್, ಮುಖಂಡರಾದ ವೆಂಕಟಸ್ವಾಮಿ, ಅತ್ತಿಬೆಲೆ ಸಿ.ಮುನಿರಾಜು ಮತ್ತಿ ತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.