ADVERTISEMENT

ಸೌಲಭ್ಯ ಸದ್ಬಳಕೆ: ಸಂತಸ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2012, 19:30 IST
Last Updated 1 ಫೆಬ್ರುವರಿ 2012, 19:30 IST
ಸೌಲಭ್ಯ ಸದ್ಬಳಕೆ: ಸಂತಸ
ಸೌಲಭ್ಯ ಸದ್ಬಳಕೆ: ಸಂತಸ   

ವಿಜಯಪುರ: ಪುರಸಭೆ ನೀಡುತ್ತಿರುವ ಸೌಲಭ್ಯಗಳನ್ನು ಶಾಲೆ ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಎಂ.ಆರ್. ಮಂಜುನಾಥ್ ಹರ್ಷ ವ್ಯಕ್ತಪಡಿಸಿದರು.

ಇಲ್ಲಿನ ಗುರಪ್ಪನ ಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ(ಪೂರ್ವ)ಯಲ್ಲಿ ಪುರಸಭೆಯ ಶೇ.22.75 ಮತ್ತು ಶೇ. 7.25 ಯೋಜನೆಯಡಿ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಣಾ ಕಾರ್ಯಕ್ರಮದಲ್ಲಿ ಅವರ ಮಾತನಾಡಿದರು.

ಪುರಸಭಾ ಸದಸ್ಯ ಮತ್ತು ಎಸ್‌ಡಿಎಂಸಿ ಅಧ್ಯಕ್ಷ ಎಚ್. ಎಂ. ಕೃಷ್ಣಪ್ಪ ಮಾತನಾಡಿ, ಶಾಲೆ ಶೈಕ್ಷಣಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಹಿಂದುಳಿದಿತ್ತು. ಆದರೆ ಈಗ ಪರಿಸ್ಥಿತಿ ಸುಧಾರಿಸಿದ್ದು, ಉತ್ತಮ ಫಲಿತಾಂಶ ಬರುತ್ತಿದೆ ಎಂದು ಹೇಳಿದರು.    
   
ಶಾಲೆಗೆ ಬ್ಯಾಂಡ್ ಸೆಟ್‌ಗಳನ್ನು ಉಚಿತವಾಗಿ ನೀಡಿದ, ದೇವನಹಳ್ಳಿ ಪುರಸಭೆ ಅಧ್ಯಕ್ಷೆ ರತ್ನಮ್ಮ ಗಾರೆ ರವಿಕುಮಾರ್ ಮತ್ತು ಭಾರತ ಸೈನಿಕ ದಳದ ಸಮವಸ್ತ್ರವನ್ನು ನೀಡಿದ ಸಾದಹಳ್ಳಿಯ ಕಮಲ್ ಕಂದಹಾರಿ ಅವರನ್ನು ಅಭಿನಂದಿಸಲಾಯಿತು.

ವಿವೇಕಾನಂದ ಜಯಂತಿ ಅಂಗವಾಗಿ ನಡೆಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಪುರಸಭಾ ಸದಸ್ಯ ಟಿಲ್ಲರ್ ಮಂಜುನಾಥ್, ಮುಖ್ಯ ಶಿಕ್ಷಕಿ ಸರಸ್ವತಮ್ಮ ಮತ್ತಿತರರು ಉಪಸ್ಥಿತರಿದ್ದರು. ಸರಸ್ವತಮ್ಮ ಸ್ವಾಗತಿಸಿದರು. ಶ್ರಿನಿವಾಸ್ ನಿರೂಪಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.