ವಿಜಯಪುರ: ಗ್ರಾಮ ಪಂಚಾಯಿತಿ ಹಣ ದುರ್ಬಳಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಸಮೀಪದ ಕೋರಮಂಗಲ ಗ್ರಾಮ ಪಂಚಾಯಿತಿಯ ಮೂವರು ಸದಸ್ಯರನ್ನು ರಾಜ್ಯ ಚುನಾವಣಾ ಆಯೋಗವು ಅನರ್ಹಗೊಳಿಸಿ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿ ಸದಸ್ಯರಾದ ರಾಧಮ್ಮ, ಪ್ರಕಾಶ್ ಮತ್ತು ಮುನಿಭೈರಪ್ಪ ಅನರ್ಹಗೊಂಡ ಸದಸ್ಯರು. ಗ್ರಾಮ ಪಂಚಾಯಿತಿ ಕಾಮಗಾರಿಯನ್ನು ಇವರೇ ನಿರ್ವಹಿಸಿ ಚೆಕ್ ಮೂಲಕ ಹಣ ಪಾವತಿಸಿಕೊಂಡಿದ್ದರು.
ಈ ಬಗ್ಗೆ ಗ್ರಾಮದ ಎಂ.ವೀರಪ್ಪ ಮತ್ತು ನಾರಾಯಣಪ್ಪ ಎಂಬುವರು ಚುನಾವಣಾ ಆಯೋಗಕ್ಕೆ ದೂರು ನೀಡಿ ಇವರ ಸದಸ್ಯತ್ವ ರದ್ದು ಮಾಡುವಂತೆ ಕೋರಿದ್ದರು. ವಿಚಾರಣೆ ನಡೆಸಿದ ರಾಜ್ಯ ಚುನಾವಣಾ ಆಯೋಗವು ತಕ್ಷಣವೇ ಜಾರಿಗೆ ಬರುವಂತೆ ಈ ಮೂವರು ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.