ADVERTISEMENT

‘ಜನರ ನಿರೀಕ್ಷೆ ಹುಸಿಗೊಳಿಸಿದ ಕಾಂಗ್ರೆಸ್‌’

​ಪ್ರಜಾವಾಣಿ ವಾರ್ತೆ
Published 8 ಜನವರಿ 2014, 9:31 IST
Last Updated 8 ಜನವರಿ 2014, 9:31 IST

ಆನೇಕಲ್‌: ಭ್ರಷ್ಟಾಚಾರ ಆರೋಪ ವಿರುವ ಕಳಂಕಿತರಿಗೆ ಸಚಿವ ಸಂಪುಟ ದಲ್ಲಿ ಸ್ಥಾನ ನೀಡುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಜನತೆಯ ನಿರೀಕ್ಷೆ ಯನ್ನು ಹುಸಿಗೊಳಿಸಿದೆ ಎಂದು ಮಾಜಿ ಸಚಿವ ಎ.ನಾರಾಯಣ ಸ್ವಾಮಿ ಟೀಕಿಸಿದರು.

ಪಟ್ಟಣದಲ್ಲಿ ಸರ್ಕಾರದ ರೈತ ವಿರೋಧಿ ನೀತಿ ಹಾಗೂ ಕಳಂಕಿತರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿರು ವುದನ್ನು ಖಂಡಿಸಿ ತಾಲ್ಲೂಕು ಬಿಜೆಪಿ ಘಟಕ ಹಮ್ಮಿಕೊಂಡಿದ್ದ ಪ್ರತಿಭಟನೆ ಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಚಿವ ಡಿ.ಕೆ.ಶಿವಕುಮಾರ್‌, ರೋಷನ್‌ ಬೇಗ್‌ ಅವರ ಮೇಲೆ ಭ್ರಷ್ಟಾಚಾರದ ಹಲವು ಆರೋಪ ಗಳಿದ್ದರೂ  ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ಮೂಲಕ ಕಾಂಗ್ರೆಸ್‌ ಸರ್ಕಾರ ತನ್ನ ನೈತಿಕತೆ ಕಳೆದುಕೊಂಡಿದೆ. ಈ ಸರ್ಕಾರಕ್ಕೆ ಮುಂಬ ರುವ ಲೋಕಸಭಾ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ತಾಲ್ಲೂಕಿನಲ್ಲಿ 7200 ಮಂದಿ ಬಗರ್‌ ಹುಕುಂ ಜಮೀನು ಮಂಜೂರಾ ತಿಗಾಗಿ 50 ಮತ್ತು 53 ನಮೂನೆ ಸಲ್ಲಿಸಿದ್ದಾರೆ. ಈ ಪೈಕಿ 698 ಮಂದಿಗೆ ಜಮೀನು ಮಂಜೂರಾಗಿದೆ. ನ್ಯಾಯಾ ಲಯಗಳೂ ಹಕ್ಕುಪತ್ರ ನೀಡುವಂತೆ ಸೂಚಿಸಿವೆ. ಕೂಡಲೇ ಹಕ್ಕು ಪತ್ರಗ ಳನ್ನು ವಿತರಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಜೆ.ನಾರಾ ಯಣಪ್ಪ ಮಾತನಾಡಿ, ‘ತಾಲ್ಲೂಕಿನ ಇಂಡ್ಲವಾಡಿ ಗ್ರಾ.ಪಂ. ವ್ಯಾಪ್ತಿಯ ತಮ್ಮನಾಯಕನ ಹಳ್ಳಿ, ಚೂಡಹಳ್ಳಿ ಗ್ರಾಮಗಳಲ್ಲಿ ನೂರಾರು ಕುಟುಂಬ ಗಳು ಎರಡು ಮೂರು ತಲೆಮಾ ರುಗಳಿಂದ ಸರ್ವೆ ನಂ. 80 ಮತ್ತು 81ರ ಸರ್ಕಾರಿ ಗೋಮಾಳ ದಲ್ಲಿ ಸಾಗುವಳಿ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ. ಇದೀಗ ಸರ್ಕಾರ ಇವರನ್ನು ಒಕ್ಕಲೆಬ್ಬಿಸಲು ಮುಂದಾ ಗಿರುವುದು ಖಂಡನೀಯ ಎಂದರು.

ದೇವರಕೊಂಡಪ್ಪ ವೃತ್ತದಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿ ತಹಶೀಲ್ದಾರ್‌ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ.ಶಿವಪ್ಪ, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ, ತಾಲ್ಲೂಕು ಅಧ್ಯಕ್ಷ ಬಿ.ಜಿ.ಆಂಜಿನಪ್ಪ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ, ಟೌನ್‌ ಅಧ್ಯಕ್ಷ ಶಿವರಾಮ್‌, ಎಪಿಎಂಸಿ ಸದಸ್ಯ ಬಿ.ನಾಗರಾಜು, ಆನೇಕಲ್‌ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜಯ್ಯಣ್ಣ, ಪಿಎಲ್‌ಡಿ ಬ್ಯಾಂಕ್‌ ಮಾಜಿ ಅಧ್ಯಕ್ಷ ವಿ.ಆಂಜಿನಪ್ಪ, ಪುರಸಭಾ ಸದಸ್ಯರಾದ ಕೆ.ನಾಗರಾಜು, ನರಸಿಂಹರೆಡ್ಡಿ, ರಾಜರತ್ನಂ, ತಾ.ಪಂ ಮಾಜಿ ಅಧ್ಯಕ್ಷೆ ತೇಜಶ್ರೀ ನಟರಾಜ್‌, ಮುಖಂಡರಾದ ದಿನ್ನೂರು ರಾಜು, ಸಾ.ವ.ಪ್ರಕಾಶ್‌, ನಾಯನಹಳ್ಳಿ ಮುನಿ ರಾಜು, ಎಂ.ಆರ್‌.ಯಲ್ಲಪ್ಪ, ಸತ್ಯೇಂದ್ರ ಕುಮಾರ್‌, ಶ್ರೀನಿವಾಸ ರೆಡ್ಡಿ, ಬಂಡಾ ಪುರ ರಾಮಚಂದ್ರ  ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.