ಚನ್ನಪಟ್ಟಣ: ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಸಿದ್ದೇ ಯುಪಿಎ ಸರ್ಕಾರದ ಸಾಧನೆಯಾಗಿದೆ ಎಂದು ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಟೀಕಿಸಿದರು.
ಪಟ್ಟಣದ ವಿಶ್ವಪ್ರೇಮಿ ಸಮಾರಂಭ ಭವನದಲ್ಲಿ ಸೋಮವಾರ ನಡೆದ
ತಾಲ್ಲೂಕು ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಸಚಿವರು ಮಾಡಿದ ಹಗರಣಗಳು ಜಾಗತಿಕ ಮಟ್ಟದಲ್ಲಿ ದೇಶ ತಲೆತಗ್ಗಿಸುವಂತೆ ಮಾಡಿದೆ ಎಂದು ಹರಿಹಾಯ್ದರು.
ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರಾಜುಗೌಡ ಮಾತನಾಡಿ, ಕ್ಷೇತ್ರದಲ್ಲಿ ಹಿಂದೆ ಗೆಲುವು ಸಾಧಿಸಿದವರು ಕ್ಷೇತ್ರದ ಅಭಿವೃದ್ದಿಗಾಗಿ ಕೇಂದ್ರದಿಂದ ಬಂದ ಅನುದಾನವನ್ನು ಬಳಸಿಕೊಳ್ಳಲು ವಿಫಲರಾಗಿದ್ದಾರೆ ಎಂದು ಟೀಕಿಸಿದರು.
ವಿರೋಧ ಪಕ್ಷದವರು ತಮ್ಮನ್ನು ಡಮ್ಮಿ ಅಭ್ಯರ್ಥಿ ಎಂದು ಬಿಂಬಿಸಲು ಹೊರಟಿದ್ದು, ಚುನಾವಣೆಯಲ್ಲಿ ಯಾರು ಡಮ್ಮಿ, ಯಾರು ಬಲಾಢ್ಯರು ಎಂಬುದು ತಿಳಿಯಲಿದೆ. ಈ ಬಾರಿ ಬಿಜೆಪಿ ಗೆಲುವು ಖಚಿತ ಎಂದು ಮುನಿರಾಜ ಗೌಡ ವಿಶ್ವಾಸ ವ್ಯಕ್ತಪಡಿಸಿ ದರು. ವಿಧಾನಪರಿಷತ್ ಸದಸ್ಯ ರಾಮ ಚಂದ್ರೇಗೌಡ ಒಕ್ಕಲಿಗರ ಸಂಘದ ನಿರ್ದೇ ಶಕ ಜಾಲಹಳ್ಳಿ ರವಿ, ಮುರಳಿ ಮನೋಹರ್, ಪರಿಚಿತರಾಜೇ ಅರಸ್, ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಗರಾಜು, ಜಿಲ್ಲಾ ಕಾರ್ಯದರ್ಶಿ ರವಿಕುಮಾರ್‌ಗೌಡ ಮುಂತಾದವರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.