ದೇವನಹಳ್ಳಿ: ಸಿಎಸ್‌ಆರ್ ನಿಧಿಯಿಂದ ಜಿಲ್ಲೆಯಲ್ಲಿರುವ 101 ಗ್ರಾಮ ಪಂಚಾಯಿತಿಯಲ್ಲಿಯೂ ತಲಾ ಒಂದು ಸುಸಜ್ಜಿತ ಸರ್ಕಾರಿ ಶಾಲೆಯನ್ನು ನಿರ್ಮಿಸಲಾಗಿದ್ದು, ಇದೇ ತಿಂಗಳು 28ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಪಟ್ಟಣದ ಬಿಬಿ ರಸ್ತೆಯಲ್ಲಿರುವ ಕೊರಚರಪಾಳ್ಯ ಸರ್ಕಾರಿ ಶಾಲೆಯ ಶತಮಾನೋತ್ಸವ ಸಮಾರಂಭದಲ್ಲಿ ಶನಿವಾರ ಮಾತನಾಡಿ, ‘ನಾನು 1951ರಲ್ಲಿ ಒಂದು ದೇವಸ್ಥಾನದಲ್ಲಿ ಕಲಿಕೆ ಪ್ರಾರಂಭಿಸಿ ಈ ಸ್ಥಾನಕ್ಕೆ ಬಂದಿದ್ದೇನೆ. ವಿದ್ಯೆ ಎಲ್ಲರ ಜೀವನದಲ್ಲಿಯೂ ಪ್ರಮುಖ ಪಾತ್ರವಹಿಸುತ್ತದೆ’ ಎಂದರು.
ಮಹಾತ್ಮ ಗಾಂಧಿ ಅವರ ಜನ್ಮದಿನಾಚರಣೆ ಅಕ್ಟೋಬರ್ 2ರಂದು ಸರ್ಕಾರದಿಂದ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಆರಂಭಿಸಿ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿಯೂ ಸುಸಜ್ಜಿತ ಶಾಲೆ ನಿರ್ಮಿಸುವ ಸಂಕಲ್ಪ ಮಾಡಿದ್ದೇವು, ಅದು ಸರ್ಕಾರಗೊಂಡು ಈ ತಿಂಗಳು ಲೋಕಾರ್ಪಣೆಯಾಗಲಿದೆ ಎಂದರು.
ಕೊರಚೆಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದದಿಂದ ನಿರ್ಮಿಸಿದ್ದು ಶಾಲೆಯು ಸುಸಜ್ಜಿತವಾಗಿದೆ. ಇಲ್ಲಿ ಹೆಚ್ಚಿನ ಕಲಿಕಾ ಕೊಠಡಿಗಳು ಬೇಕಾಗಿರುವ ಹಿನ್ನಲೆಯಲ್ಲಿ ಮನವಿ ಸಲ್ಲಿಸಿದ್ದು ತಾಲ್ಲೂಕು ಮತ್ತು ಜಿಲ್ಲಾಡಳಿತಯಿಂದ ಚರ್ಚೆ ನಡೆಸಿ ಇದರ ಕುರಿತು ತೀರ್ಮಾಣ ಮಾಡಲಾಗುವುದು ಎಂದರು.
‘ವಿದ್ಯಾರ್ಥಿಗಳ ಕಲಿಕೆಯ ಹಿತದೃಷ್ಟಿಯಿಂದ ನಾವು ಮಕ್ಕಳ ಕಲಿಕೆಗೆ ಎಲ್ಲಾ ರೀತಿಯ ನೆರವು ಕಲ್ಪಿಸಿ ಶಾಲೆಗಳ ಮೇಲ್ದರ್ಜೆಗೆ ಏರಿಸುವುದರೊಂದಿಗೆ ಕ್ರೀಡಾಂಗಣ, ಪ್ರಯೋಗಾಲಯ, ಗ್ರಂಥಾಲಯ, ಕುಡಿಯುವ ನೀರಿನ ಸೌಲಭ್ಯ ಮುಂತಾದ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಸಂಸದ ಡಾ. ಕೆ.ಸುಧಾಕರ್, ಮಾಜಿ ಶಾಸಕ ಚಂದ್ರಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜಣ್ಣ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಗನ್ನಾಥ್, ಬಯ್ಯಪ ಅದ್ಯಕ್ಷ ಶಾಂತಕುಮಾರ್, ಹಿರಿಯ ವಿಧ್ಯಾರ್ಥಿಗಳು ಒಕ್ಕೂಟದ ರವಿಕುಮಾರ್, ಗಂಗಾದರಪ್ಪ, ಪುಟ್ಟಸ್ವಾಮಿ, ವೆಂಕಟೇಶ್, ಗೀತಾ ಚನ್ನಬಸಪ್ಪ, ವೇದಾವತಿ ಆಶಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.