ADVERTISEMENT

ಆನೇಕಲ್: ಬಾರ್‌ನಲ್ಲಿ ಪ್ರಾರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2025, 2:04 IST
Last Updated 19 ನವೆಂಬರ್ 2025, 2:04 IST
<div class="paragraphs"><p>(ಸಾಂದರ್ಭಿಕ ಚಿತ್ರ)</p></div>

(ಸಾಂದರ್ಭಿಕ ಚಿತ್ರ)

   

ಆನೇಕಲ್: ತಾಲ್ಲೂಕಿನ ಅತ್ತಿಬೆಲೆ ಪೊಲೀಸ್‌ ಠಾಣೆ ವ್ಯಾಪ್ತಿಯ ಬಳ್ಳೂರು ಗ್ರಾಮದಲ್ಲಿ ಮಂಗಳವಾರ ಕ್ಷುಲ್ಲಕ ಕಾರಣಕ್ಕೆ ಬಾರ್‌ನಲ್ಲಿ ಪ್ರಾರಂಭವಾದ ಗಲಾಟೆ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ.

ಕೊಲೆಯಾದ ವ್ಯಕ್ತಿಯನ್ನು ತಮಿಳುನಾಡಿನ ಮೂಲದ ಬಲರಾಮನ್‌ (28) ಎಂದು ಗುರುತಿಸಲಾಗಿದೆ.

ADVERTISEMENT

ಬಲರಾಮನ್‌ ಅವರು ಬಾಗಲೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಟ್ಯಾಂಕ್‌ ಕ್ಲೀನಿಂಗ್‌ ಕೆಲಸ ಮಾಡುತ್ತಿದ್ದರು. ಬಾರ್‌ನಲ್ಲಿದ್ದಾಗ ಪಕ್ಕದ ಟೇಬಲ್‌ನಲ್ಲಿದ್ದವರೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ್ದಾನೆ. ಬಾರ್‌ನ ಸಿಬ್ಬಂದಿ ಗಲಾಟೆ ಬಿಡಿಸಿ ಬಲರಾಮನ್‌ ಅವರನ್ನು ಹೊರಗೆ ಕಳಿಸಿದ್ದರು. ಬಾರ್‌ನಿಂದ ಹೊರ ಬಂದು ಬಲರಾಮನ್‌ ತಲೆಯ ಮೇಲೆ ಕಲ್ಲನ್ನು ಎತ್ತಿಹಾಕಿ ಕೊಲೆ ಮಾಡಿದ್ದಾರೆ.

ಅತ್ತಿಬೆಲೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬಾರ್‌ನ ಸಿ.ಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.