ADVERTISEMENT

ಅತ್ತಿಬೆಲೆ ಸಾರಿಗೆ ಇಲಾಖೆ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2022, 4:19 IST
Last Updated 1 ಅಕ್ಟೋಬರ್ 2022, 4:19 IST
ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯ ಸಾರಿಗೆ ಇಲಾಖೆಯ ಚೆಕ್‌ಪೋಸ್ಟ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿತು
ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯ ಸಾರಿಗೆ ಇಲಾಖೆಯ ಚೆಕ್‌ಪೋಸ್ಟ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿತು   

ಆನೇಕಲ್: ತಾಲ್ಲೂಕಿನ ಅತ್ತಿಬೆಲೆಯ ಸಾರಿಗೆ ಇಲಾಖೆಯ ಚೆಕ್‌ಪೋಸ್ಟ್‌ ಮೇಲೆ ಲೋಕಾಯುಕ್ತ ಎಸ್ಪಿ ಜೋಶಿ ಶ್ರೀನಾಥ್‌ ಮಹಾದೇವ್‌ ಅವರ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿತು.

ಲೋಕಾಯುಕ್ತ ಅಧಿಕಾರಿಗಳನ್ನುಗಮನಿಸಿದ ಹಿರಿಯ ಮೋಟಾರ್ ವಾಹನನಿರೀಕ್ಷಿಕಿ ಲಕ್ಷ್ಮಿ ಎಂಬುವರು ಚೆಕ್‌
ಪೋಸ್ಟ್‌ನ ಕಿಟಕಿಯಿಂದ ₹14 ಸಾವಿರಅಕ್ರಮ ಹಣವನ್ನು ಹೊರಗೆ ಎಸೆದಿದ್ದರು.ಇದನ್ನು ಗಮನಿಸಿದ ಅಧಿಕಾರಿಗಳು ಕಚೇರಿಯಿಂದ ಹೊರಹೋಗಿ ಪರಿಶೀಲಿಸಿ ಹಣವನ್ನು ವಶಕ್ಕೆ ಪಡೆದರು. ಅಲ್ಲದೆ, ಈ ವೇಳೆ₹62,227 ಅಕ್ರಮ ಹಣ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ್‌ ಅವರು ವಿಜಯಪುರಕ್ಕೆ ಭೇಟಿ ನೀಡಿದ್ದಾಗ ಪ್ರಾದೇಶಿಕ ಸಾರಿಗೆ ಇಲಾಖೆಯ ಚೆಕ್‌ಪೋಸ್ಟ್‌ಗಳಲ್ಲಿ ನಡೆಯುತ್ತಿರುವ ಅವ್ಯವಹಾರ ಅಕ್ರಮಗಳ ಬಗ್ಗೆ ಮೌಖಿಕವಾಗಿ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗಿನ ಜಾವ 4.30ರಿಂದ ರಾಜ್ಯದ ವಿವಿಧ ಚೆಕ್‌ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.