ADVERTISEMENT

ಜಡಿಗೇನಹಳ್ಳಿ: ಮೊರಾರ್ಜಿ ದೇಸಾಯಿ ಕಾಲೇಜಿಗೆ ಶೇ 94.28 ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 15 ಜುಲೈ 2020, 16:10 IST
Last Updated 15 ಜುಲೈ 2020, 16:10 IST

ಸೂಲಿಬೆಲೆ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಶೇ 94.28 ಫಲಿತಾಂಶ ಪಡೆದುಕೊಂಡಿದೆ ಎಂದು ಪ್ರಾಂಶುಪಾಲ ಕಿರಣ್ ಕುಮಾರ್‌ ತಿಳಿಸಿದ್ದಾರೆ.

ಸರ್ಕಾರಿ ಕಾಲೇಜುಗಳು ಖಾಸಗಿ ಕಾಲೇಜುಗಳಿಗಿಂತ ಕಡಿಮೆಯಿಲ್ಲ ಎನ್ನುವುದನ್ನು ನಮ್ಮ ಸರ್ಕಾರಿ ವಸತಿ ಕಾಲೇಜಿನ ವಿದ್ಯಾರ್ಥಿಗಳ ಫಲಿತಾಂಶ ತೋರಿಸಿಕೊಟ್ಟಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಣಿತದಲ್ಲಿ 4, ಭೌತವಿಜ್ಞಾನ ಒಬ್ಬ ವಿದ್ಯಾರ್ಥಿ 100 ಅಂಕಗಳನ್ನು ಪಡೆದುಕೊಂಡಿದ್ದಾರೆ. ಸೌಜನ್ಯ.ಕೆ.ಸಿ (ಶೇ 95.5) ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಭಾಗ್ಯಮ್ಮ.ಬಿ (ಶೇ 94.8) ಹಾಗೂ ತುಳಸಿ (ಶೇ 91) ಅಂಕಗಳನ್ನು ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.