ಕಾಲಿಗೆ ಗುಂಡೇಟು
ಹೊಸಕೋಟೆ: ನಗರದ ಟೋಲ್ ಬಳಿ ಡ್ರಗ್ಸ್ ಪೆಡ್ಲರ್ ಒಬ್ಬನ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಟೋಲ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಸುಹೇಲ್ ಅಲಿಯಾಸ್ ಜಾದೂ ಎಂಬ ಯುವಕನನ್ನು ಬಂಧಿಸಲು ಮುಂದಾದಾಗ ಪೊಲೀಸರ ಮೇಲೆ ಡ್ರ್ಯಾಗರ್‌ನಿಂದ ಹಲ್ಲೆಗೆ ಮುಂದಾಗಿದ್ದಾನೆ.
ಈ ಸಂದರ್ಭದಲ್ಲಿ ನಗರ ಠಾಣೆ ಸಿಪಿಐ ಅಶೋಕ್, ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ. ಆರೋಪಿಯನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಧಿತ ಸುಹೇಲ್ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಂಜಾ ಮಾರಾಟ ಮಾಡುತ್ತಿದ್ದ ಮತ್ತಿಬ್ಬರು ಪರಾರಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.